ಐಟಿ ಇಲಾಖೆ 1800 ಕೋಟಿ ರೂ. ನೋಟಿಸ್: ಚುನಾವಣೆ ವೇಳೆ ಆರ್ಥಿಕವಾಗಿ ವಿಪಕ್ಷಗಳ ಕತ್ತು ಹಿಸುಕುತ್ತಿದೆ ಬಿಜೆಪಿ; ಕಾಂಗ್ರೆಸ್ ಕಿಡಿ

ಕಾಂಗ್ರೆಸ್‌ ನಾಯಕರ ಬಿಜೆಪಿ ಸೇರ್ಪಡೆ, ಇಂಡಿಯಾ ಒಕ್ಕೂಟದಲ್ಲಿ ಬಿರುಕಿನ ಮಧ್ಯೆಯೇ ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆಯ ಶಾಕ್ ನೀಡಿದ್ದು, ಕೆಲ ವರ್ಷಗಳಿಂದ ತೆರಿಗೆ ರಿಟರ್ನ್ಸ್‌ನಲ್ಲಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ 1,800 ಕೋಟಿ ರೂಪಾಯಿ ಪಾವತಿ ಮಾಡುವಂತೆ ನೋಟಿಸ್‌ ಜಾರಿಗೊಳಿಸಿದೆ.
ನವದೆಹಲಿಯ ಎಐಸಿಸಿ ಪ್ರಧಾನ ಕಛೇರಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ಅಜಯ್ ಮಾಕನ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ನವದೆಹಲಿಯ ಎಐಸಿಸಿ ಪ್ರಧಾನ ಕಛೇರಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ಅಜಯ್ ಮಾಕನ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ನವದೆಹಲಿ: ಕಾಂಗ್ರೆಸ್‌ ನಾಯಕರ ಬಿಜೆಪಿ ಸೇರ್ಪಡೆ, ಇಂಡಿಯಾ ಒಕ್ಕೂಟದಲ್ಲಿ ಬಿರುಕಿನ ಮಧ್ಯೆಯೇ ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆಯ ಶಾಕ್ ನೀಡಿದ್ದು, ಕೆಲ ವರ್ಷಗಳಿಂದ ತೆರಿಗೆ ರಿಟರ್ನ್ಸ್‌ನಲ್ಲಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ 1,800 ಕೋಟಿ ರೂಪಾಯಿ ಪಾವತಿ ಮಾಡುವಂತೆ ನೋಟಿಸ್‌ ಜಾರಿಗೊಳಿಸಿದೆ.

ತೆರಿಗೆ ನೋಟೀಸ್​ಗಳನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿನ್ನೆ ತಿರಸ್ಕರಿಸಿತ್ತು. ಅದರ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ಹೊಸ ನೋಟೀಸ್ ನೀಡಿದೆ.ಈ ನೋಟಿಸ್ ಕುರಿತು ಕಾಂಗ್ರೆಸ್ ತೀವ್ರವಾಗಿ ಕಿಡಿಕಾರಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು, ಏ.19ರಿಂದ ಲೋಕಸಭಾ ಚುನಾವಣೆ ಆರಂಭವಾಗುತ್ತಿದ್ದು, ಚುನಾವಣೆ ಹೊತ್ತಿನಲ್ಲಿ ಮೋದಿ ಸರ್ಕಾರ ಕಾಂಗ್ರೆಸ್ ಪಕ್ಷವನ್ನು ದಿವಾಳಿ ಮಾಡಲು ಪ್ರಯತ್ನಿಸುತ್ತಿದೆ. ಆರ್ಥಿಕವಾಗಿ ವಿರೋಧ ಪಕ್ಷಗಳ ಕತ್ತು ಹಿಸುಕುವ ಪ್ರಯತ್ನ ಮಾಡುತ್ತಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ.

1,823.08 ಕೋಟಿ ರೂ. ದಂಡ ಪಾವತಿಸುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಸಾಮಾನ್ಯವಾಗಿ ರಾಜಕೀಯ ಪಕ್ಷಗಳಿಗೆ ತೆರಿಗೆ ವಿನಾಯಿತಿ ಇರುತ್ತದೆ. ಆದರೆ, ರಿಟರ್ನ್ಸ್ ಸಲ್ಲಿಕೆ ವಿಳಂಬದ ಹೆಸರಿನಲ್ಲಿ ಈ ದಂಡ ವಿಧಿಸಲಾಗುತ್ತಿದೆ. ಚುನಾವಣೆ ಎದುರಿಸುತ್ತಿರುವ ಸಮಯದಲ್ಲಿ ಕಾಂಗ್ರೆಸ್ ಪಕ್ಷವನ್ನು ದಿವಾಳಿ ಮಾಡುವ ನಿರ್ದಿಷ್ಟ ಉದ್ದೇಶದಿಂದ ಮೋದಿ ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಚುನಾವಣೆ ವೇಳೆ ವಿರೋಧ ಪಕ್ಷಗಳನ್ನು ಗುರಿಯಾಗಿಸಲು ಮೋದಿ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ. ಇದರ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತೇವೆಂದು ಹೇಳಿದ್ದಾರೆ.

ನವದೆಹಲಿಯ ಎಐಸಿಸಿ ಪ್ರಧಾನ ಕಛೇರಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ಅಜಯ್ ಮಾಕನ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್‌ಗೆ 1,700 ಕೋಟಿ ರೂ. ಹೊಸ ನೋಟಿಸ್!

ಸರ್ಕಾರ ಕಾರ್ಯವಿಧಾನವನ್ನು ಬಳಸಿಕೊಂಡು ವಿರೋಧ ಪಕ್ಷಗಳ ಮೇಲೆ ದಾಳಿ ಮಾಡುತ್ತಿದೆ. ಇದು ಪ್ರಜಾಪ್ರಭುತ್ವವನ್ನು ಕುಗ್ಗಿಸಲು ಮಾಡುತ್ತಿರುವ ಯತ್ನವಾಗಿದೆ. ಬಿಜೆಪಿ ಕೂಡ ಯಾವುದೇ ಐಟಿ ರಿಟರ್ನ್ಸ್ ಪಾವತಿಸಿಲ್ಲ, ಆದರೂ, ಸುರಕ್ಷಿತವಾಗಿದೆ. ಈ ಹಿಂದೆಯೂ ನಮ್ಮ ಖಾತೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಹಣ ಪಾವತಿ ಮಾಡುವಂತೆ ಸೂಚಿಸಲಾಗಿದೆ. ಇದರಿಂದ ಮುಂಬರುವ ಚುನಾವಣೆ ವೇಳೆ ಪಕ್ಷಕ್ಕೆ ಭಾರೀ ಹಿನ್ನಡೆಯುಂಟಾಗಲಿದೆ ಎಂದು ತಿಳಿಸಿದ್ದಾರೆ.

ಆದಾಯ ತೆರಿಗೆ (ಐಟಿ) ಇಲಾಖೆ ತನ್ನ ವಿರುದ್ಧ ಪ್ರಾರಂಭಿಸಿದ್ದ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಸಲ್ಲಿಸಿದ್ದ ನಾಲ್ಕು ಹೊಸ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ನಿನ್ನೆ ವಜಾಗೊಳಿಸಿತ್ತು.

2014-15, 2015-16 ಮತ್ತು 2016-17ರ ಮರುಮೌಲ್ಯಮಾಪನ ಪ್ರಕ್ರಿಯೆ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಮಾರ್ಚ್ 22ರಂದು ವಜಾಗೊಳಿಸಿತ್ತು. ಅವುಗಳಂತೆಯೇ ನಾಲ್ಕು ಹೊಸ ಅರ್ಜಿಗಳನ್ನು ನ್ಯಾಯಾಲಯ ಗುರುವಾರ ವಜಾಗೊಳಿಸಿತ್ತು.

ನವದೆಹಲಿಯ ಎಐಸಿಸಿ ಪ್ರಧಾನ ಕಛೇರಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ಅಜಯ್ ಮಾಕನ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಬ್ಯಾಂಕ್ ಖಾತೆ ಜಪ್ತಿ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಆದಾಯ ತೆರಿಗೆ ನ್ಯಾಯಾಧಿಕರಣ

ಕೆಲ ವಾರಗಳಿಂದೀಚೆಗೆ ಅನೇಕ ತೆರಿಗೆ ಸಂಬಂಧಿ ಪ್ರಕ್ರಿಯೆಗಳಿಗೆ ಒಳಗಾಗಿರುವ ಕಾಂಗ್ರೆಸ್‌ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಕೇಂದ್ರ ಸರ್ಕಾರ ತನ್ನನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿತ್ತು.

ಆದಾಯ ತೆರಿಗೆ ಕಾಯಿದೆಯಡಿ 2014-15 ರಿಂದ 2020-21ರವರೆಗೆ ಕಾಂಗ್ರೆಸ್‌ನ ಆದಾಯವನ್ನು ಮತ್ತಷ್ಟು ಪರಿಶೀಲನೆ ನಡೆಸುವುದಕ್ಕೆ ಆದಾಯ ತೆರಿಗೆ ಇಲಾಖೆಯ ಬಳಿ ಯಥೇಚ್ಛ ಹಾಗೂ ದೃಢವಾದ ಪುರಾವೆಗಳಿವೆ ಎಂದು ಮಾರ್ಚ್ 22ರಂದು ನ್ಯಾಯಾಲಯ ಹೇಳಿತ್ತು.

ಅಂತೆಯೇ, ಆದಾಯ ತೆರಿಗೆ (ಐಟಿ) ಇಲಾಖೆ ರೂ.105 ಕೋಟಿಗಿಂತಲೂ ಹೆಚ್ಚಿನ ತೆರಿಗೆ ಪಾವತಿಸುವಂತೆ ತನಗೆ ನೀಡಿದ್ದ ನೋಟಿಸ್‌ಗೆ ತಡೆ ನೀಡಲು ನಿರಾಕರಿಸಿದ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಆದೇಶ ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಮನವಿಯನ್ನು ಅದು ಮಾರ್ಚ್ 13ರಂದು ತಿರಸ್ಕರಿಸಿತ್ತು.

ಇದೇ ನ್ಯಾಯಮೂರ್ತಿಗಳಿದ್ದ ಪೀಠ ಐಟಿಎಟಿ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಕಾರಣವಿಲ್ಲ ಎಂದು ಅಂದು ಹೇಳಿತ್ತು. ಆದರೂ, ಪಕ್ಷದಿಂದ ರೂ 65.94 ಕೋಟಿ ವಸೂಲಿ ಮಾಡುವುದು ಸೇರಿದಂತೆ ಈ ಮಧ್ಯೆ ಸಂಭವಿಸಿದ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಐಟಿಎಟಿ ಮುಂದೆ ತಡೆಯಾಜ್ಞೆಗಾಗಿ ಹೊಸದಾಗಿ ಅರ್ಜಿ ಸಲ್ಲಿಸಲು ನ್ಯಾಯಾಲಯ ಕಾಂಗ್ರೆಸ್‌ಗೆ ಅವಕಾಶ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com