ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್‌ಗೆ 1,700 ಕೋಟಿ ರೂ. ಹೊಸ ನೋಟಿಸ್!

ಹಿಂದಿನ ವರ್ಷಗಳ ತೆರಿಗೆ ರಿಟರ್ನ್ಸ್‌ನಲ್ಲಿನ ವ್ಯತ್ಯಾಸಗಳಿಗಾಗಿ ಆದಾಯ ತೆರಿಗೆ ಇಲಾಖೆಯು 1,700 ಕೋಟಿ ರೂಪಾಯಿ ಮೊತ್ತದ ಹೊಸ ನೋಟಿಸ್ ಅನ್ನು ಕಾಂಗ್ರೆಸ್‌ಗೆ ರವಾನಿಸಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಹಣದ ಕೊರತೆಯಿರುವ ಪಕ್ಷಕ್ಕೆ ಮತ್ತೊಂದು ಹೊಡೆತ ನೀಡಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ನವದೆಹಲಿ: ಹಿಂದಿನ ವರ್ಷಗಳ ತೆರಿಗೆ ರಿಟರ್ನ್ಸ್‌ನಲ್ಲಿನ ವ್ಯತ್ಯಾಸಗಳಿಗಾಗಿ ಆದಾಯ ತೆರಿಗೆ ಇಲಾಖೆಯು 1,700 ಕೋಟಿ ರೂಪಾಯಿ ಮೊತ್ತದ ಹೊಸ ನೋಟಿಸ್ ಅನ್ನು ಕಾಂಗ್ರೆಸ್‌ಗೆ ರವಾನಿಸಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಹಣದ ಕೊರತೆಯಿರುವ ಪಕ್ಷಕ್ಕೆ ಮತ್ತೊಂದು ಹೊಡೆತ ನೀಡಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

2017-18 ರಿಂದ 2020-21 ರವರೆಗಿನ ತೆರಿಗೆ ಬಾಕಿ, ಬಡ್ಡಿ ಮತ್ತು ದಂಡಕ್ಕೆ ಸಂಬಂಧಿಸಿದಂತೆ ಹೊಸದಾಗಿ ಕಾಂಗ್ರೆಸ್‌ಗೆ ಈ ನೋಟಿಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ವಾರದ ಆರಂಭದಲ್ಲಿಯೂ ನೋಟಿಸ್ ನೀಡಲಾಗಿತ್ತು.

2018-19ನೇ ಸಾಲಿಗೆ ಸಂಬಂಧಿಸಿದಂತೆ ಐ-ಟಿ ರಿಟರ್ನ್ಸ್ ಸಲ್ಲಿಸದ ಕಾರಣಕ್ಕೆ 201 ಕೋಟಿ ರೂ. ದಂಡ ಪಾವತಿಸಬೇಕು ಎಂದು ನೋಟಿಸ್ ನೀಡಿದ್ದ ಆದಾಯ ತೆರಿಗೆ ಇಲಾಖೆಯು, ಕಾಂಗ್ರೆಸ್ ಪಕ್ಷದ ಒಂಬತ್ತು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿತ್ತು.

ಪ್ರಾತಿನಿಧಿಕ ಚಿತ್ರ
ಕಾಂಗ್ರೆಸ್ ಬ್ಯಾಂಕ್ ಖಾತೆ, 300 ಕೋಟಿ ರೂ ಸ್ಥಗಿತ.. ಇಂತಹ ಸ್ಥಿತಿಯಲ್ಲಿ ಚುನಾವಣೆ ಎದುರಿಸುವುದು ಹೇಗೆ?: ಮೋದಿ ಸರ್ಕಾರದ ವಿರುದ್ಧ ಖರ್ಗೆ ಕಿಡಿ

2017 ರಿಂದ 2021ರ ಅವಧಿಯ ತೆರಿಗೆ ಮರುಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಆರಂಭಿಸಿದ್ದ ಪ್ರಕ್ರಿಯೆಯ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್ ಗುರುವಾರ (ಮಾರ್ಚ್ 28) ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವ ಸಾಧ್ಯತೆಯಿದೆ.

ಆದಾಯ ತೆರಿಗೆ ಇಲಾಖೆಯ ಕ್ರಮದಿಂದಾಗಿ ಪಕ್ಷದ ಎಲ್ಲ ರಾಜಕೀಯ ಚಟುವಟಿಕೆಗಳ ಮೇಲೆ ಪರಿಣಾಮ ಉಂಟಾಗಿದೆ. ಏಪ್ರಿಲ್ 19 ರಿಂದ ಪ್ರಾರಂಭವಾಗುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಆರ್ಥಿಕವಾಗಿ ಪಕ್ಷದ ಕತ್ತು ಹಿಸುಕಿದೆ ಮತ್ತು ತೆರಿಗೆ ಅಧಿಕಾರಿಗಳನ್ನು ಪಕ್ಷದ ವಿರುದ್ಧ ಬಳಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

Related Stories

No stories found.

Advertisement

X
Kannada Prabha
www.kannadaprabha.com