ಕೇಂದ್ರದಲ್ಲಿ ಸರ್ಕಾರ ಬದಲಾದಾಗ ''ಪ್ರಜಾಪ್ರಭುತ್ವದ ಕಗ್ಗೊಲೆ'' ಮಾಡಿದವರ ವಿರುದ್ಧ ಕ್ರಮ: ರಾಹುಲ್ ಗಾಂಧಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿ ''ಪ್ರಜಾಪ್ರಭುತ್ವದ ಕಗ್ಗೊಲೆ'' ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ
ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿ ''ಪ್ರಜಾಪ್ರಭುತ್ವದ ಕಗ್ಗೊಲೆ'' ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ತೆರಿಗೆ ಭಯೋತ್ಪಾದನೆಯಲ್ಲಿ ತೊಡಗಿದೆ. ಕೇಂದ್ರದಲ್ಲಿ ಸರ್ಕಾರ ಬದಲಾದಾಗ, 'ಪ್ರಜಾಪ್ರಭುತ್ವವನ್ನು ಕಗ್ಗೊಲೆ' ಮಾಡಿದವರ ವಿರುದ್ಧ ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳಲಾಗುವುದು. ಮಾದರಿಯ ಕ್ರಮವನ್ನು ತೆಗೆದುಕೊಳ್ಳಲಾಗುವುದು, ಮತ್ತೆ ಯಾರೂ ಇದನ್ನು ಮಾಡಲು ಧೈರ್ಯ ಮಾಡಬಾರದು. ಇದು ನನ್ನ ಗ್ಯಾರಂಟಿ ಎಂದು ರಾಹುಲ್ ಗಾಂಧಿ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ
ನಾನು ಮಾತನಾಡಿದ್ದು ಧಾರ್ಮಿಕ 'ಶಕ್ತಿ' ಬಗ್ಗೆ ಅಲ್ಲ; ಅಧರ್ಮ, ಭ್ರಷ್ಟಾಚಾರ, ಸುಳ್ಳಿನ ಶಕ್ತಿ ಬಗ್ಗೆ: ರಾಹುಲ್ ಗಾಂಧಿ ಸ್ಪಷ್ಟನೆ

ತಮ್ಮದೇ ಹಿಂದಿನ ವಿಡಿಯೋವನ್ನು ಟ್ಯಾಗ್ ಮಾಡಿರುವ ರಾಹುಲ್ ಗಾಂಧಿ, ಪೋಸ್ಟ್‌ನೊಂದಿಗೆ "#BJPTaxTerrorism" ಎಂಬ ಹ್ಯಾಶ್‌ಟ್ಯಾಗ್ ಅನ್ನು ಬಳಸಿದ್ದಾರೆ.

ಖರ್ಗೆ ವಾಗ್ದಾಳಿ

ಏತನ್ಮಧ್ಯೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಮತ್ತು ಸಂವಿಧಾನವನ್ನು ಅವಮಾನಿಸಲು ಆದಾಯ ತೆರಿಗೆ ಇಲಾಖೆ, ಇಡಿ ಮತ್ತು ಸಿಬಿಐಯಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ಪ್ರಧಾನ ಪ್ರತಿಪಕ್ಷ ಕಾಂಗ್ರೆಸ್ ಅನ್ನು ಕೆರಳಿಸಲು ಐಟಿ ಇಲಾಖೆಯನ್ನು ಏಕೆ ಅಸ್ತ್ರವಾಗಿ ಬಳಸಲಾಗುತ್ತಿದೆ? ಎಂದು ಖರ್ಗೆ ಪ್ರಶ್ನಿಸಿದರು.

ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ
ಮೂರ್ನಾಲ್ಕು ಹಂತಗಳಲ್ಲಿ ಲೋಕಸಭೆ ಚುನಾವಣೆ ಮುಗಿಯಬೇಕಿತ್ತು: 7 ಹಂತದ ಮತದಾನಕ್ಕೆ ಖರ್ಗೆ ಆಕ್ಷೇಪ

ಇಂತಹ ಕ್ರಮಗಳು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸುವುದನ್ನು ತಡೆಯುವುದಿಲ್ಲ. ತಮ್ಮ ಪಕ್ಷವು ಭಾರತೀಯ ಜನತಾ ಪಕ್ಷದ (ಬಿಜೆಪಿ) "ಸರ್ವಾಧಿಕಾರ" ದಿಂದ ದೇಶದ ಸಂಸ್ಥೆಗಳನ್ನು ಮುಕ್ತಗೊಳಿಸುತ್ತದೆ ಎಂದು ಪ್ರತಿಜ್ಞೆ ಮಾಡಿದರು.

ಅಂತೆಯೇ ಬಿಜೆಪಿಯ 42 ಕೋಟಿ ಲೆಕ್ಕವಿಲ್ಲದ ಠೇವಣಿಗಳಿಗೆ 4,600 ಕೋಟಿ ರೂ.ಗಳ ದಂಡವನ್ನು ಹೇರಬೇಕಿತ್ತು. ಆದರೆ ಅದನ್ನು "ನಿರ್ಲಕ್ಷಿಸಲಾಗಿದೆ". ಅದೇ ರೀತಿ ಕಾಂಗ್ರೆಸ್ ನ ಶಾಸಕರು ಮತ್ತು ಸಂಸದರು ನೀಡಿದ 14 ಲಕ್ಷ ರೂ. ನಗದು ಠೇವಣಿಗಳಿಗೆ 135 ಕೋಟಿ ರೂ. ದಂಡ ಹೇರುವಂತೆ ಒತ್ತಾಯಿಸಲಾಗುತ್ತಿದೆ.

ಆದಾಯ ತೆರಿಗೆ ಇಲಾಖೆಯು ಪ್ರತಿಪಕ್ಷಗಳ ವಿರುದ್ಧ ಮಾತ್ರ ಈ ರೀತಿ ಅನ್ಯಾಯವಾಗಿ ವರ್ತಿಸುವಂತೆ ಒತ್ತಡ ಹೇರುತ್ತಿರುವವರು ಯಾರು? ಪ್ರಧಾನ ವಿರೋಧ ಪಕ್ಷವಾದ ಕಾಂಗ್ರೆಸ್‌ಗೆ ಕಿರುಕುಳ ನೀಡಲು ಐಟಿ ಇಲಾಖೆಯನ್ನು ಏಕೆ ಅಸ್ತ್ರವಾಗಿ ಬಳಸಲಾಗುತ್ತಿದೆ? ಅವರು ಐಟಿ, ಇಡಿಯಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಿಬಿಐ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಮತ್ತು ಸಂವಿಧಾನವನ್ನು ಕೀಳಾಗಿಸುತ್ತಿದೆ ಎಂದು ಅವರು ಟ್ವಿಟರ್ ನಲ್ಲಿ ಪೋಸ್ಟ್ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com