ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಸೊಸೆ ಬಿಜೆಪಿ ಸೇರ್ಪಡೆ

ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಪುತ್ರಿ ಅರ್ಚನಾ ಪಾಟೀಲ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ದೇವೇಂದ್ರ ಫಡ್ನವೀಸ್- ಅರ್ಚನಾ ಪಾಟೀಲ್
ದೇವೇಂದ್ರ ಫಡ್ನವೀಸ್- ಅರ್ಚನಾ ಪಾಟೀಲ್

ಮುಂಬೈ: ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಸೊಸೆ ಅರ್ಚನಾ ಪಾಟೀಲ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಬವಾಂಕುಲೆ ನೇತೃತ್ವದಲ್ಲಿ ಅರ್ಚನಾ ಪಾಟೀಲ್ ಬಿಜೆಪಿ ಸೇರ್ಪಡೆಯಾದರು. ಅರ್ಚನಾ ಪಕ್ಷಕ್ಕೆ ಸೇರ್ಪಡೆಯಾಗಿರುವುದರಿಂದ ಪಕ್ಷಕ್ಕೆ ಹೆಚ್ಚಿನ ಬಲ ಸಿಗಲಿದೆ ಲಾತೂರ್ ಹಾಗೂ ಮರಾಠ್ವಾಡ ಪ್ರದೇಶಗಳಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಫಡ್ನವೀಸ್ ಹೇಳಿದ್ದಾರೆ.

ಶಿವರಾಜ್ ಪಾಟೀಲ್ ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇವರ ಅವಧಿಯಲ್ಲಿ ಮುಂಬೈ ನಲ್ಲಿ ಭಯೋತ್ಪಾದಕ ದಾಳಿ ನಡೆದಿತ್ತು. ಲೋಕಸಭಾ ಚುನಾವಣೆ-2024ಗೆ ದಿನಾಂಕ ನಿಗದಿಯಾಗಿದ್ದು ಪಕ್ಷಾಂತರ ಪರ್ವ ಏರುಗತಿಯಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com