ಭ್ರಷ್ಟರ ವಿರುದ್ಧ ದೊಡ್ಡ ಹೋರಾಟ, ಕಾಂಗ್ರೆಸ್ ಮಿತ್ರಕೂಟದ ದಾಳಿಗೆ ಹೆದರುವುದಿಲ್ಲ: ಪ್ರಧಾನಿ ಮೋದಿ

ಇಂಡಿಯಾ ಒಕ್ಕೂಟದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ, ಭ್ರಷ್ಟರ ವಿರುದ್ಧ ದೊಡ್ಡ ಹೋರಾಟ, ದಾಳಿಗೆ ಹೆದರುವುದಿಲ್ಲ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿOnline desk
Updated on

ನವದೆಹಲಿ: ಇಂಡಿಯಾ ಒಕ್ಕೂಟದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ, ಭ್ರಷ್ಟರ ವಿರುದ್ಧ ದೊಡ್ಡ ಹೋರಾಟ, ದಾಳಿಗೆ ಹೆದರುವುದಿಲ್ಲ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾದ ನಂತರ ಉತ್ತರ ಪ್ರದೇಶದಲ್ಲಿ ತಮ್ಮ ಮೊದಲ ರ‍್ಯಾಲಿಯನ್ನುದ್ದೇಶಿಸಿ ಅವರು ಮಾತನಾಡಿದ ಪ್ರಧಾನಿ ಮೋದಿ, 'ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ನಿಲ್ಲಿಸುವುದಿಲ್ಲ ಮತ್ತು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಅವರ ಸ್ಥಾನಮಾನವನ್ನು ಲೆಕ್ಕಿಸದೆ ಕ್ರಮ ಕೈಗೊಳ್ಳಲಾಗುವುದು.

ಮೋದಿ ಭ್ರಷ್ಟಾಚಾರದ ವಿರುದ್ಧ ಪೂರ್ಣ ಶಕ್ತಿಯೊಂದಿಗೆ ಹೋರಾಡುತ್ತಿರುವಾಗ, ಇವರು 'ಇಂಡಿಯಾ' ಮೈತ್ರಿಕೂಟವನ್ನು ರಚಿಸಿದ್ದಾರೆ. ನನ್ನನ್ನು ಬೆದರಿಸುತ್ತೇನೆ ಎಂದು ಅವರು ಭಾವಿಸುತ್ತಾರೆ. ಆದರೆ ಭಾರತೀಯರನ್ನು ಭ್ರಷ್ಟರಿಂದ ರಕ್ಷಿಸಲು ನಾನು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ
ಪ್ರಜಾಪ್ರಭುತ್ವ ಬೇಕಾದರೆ ಇಂಡಿಯಾ ಮೈತ್ರಿಕೂಟಕ್ಕೆ ಮತ ನೀಡಿ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್‌ ಮನವಿ

ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರನ್ನು ಬೆಂಬಲಿಸಿ ನವದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ʼಇಂಡಿಯಾʼ ಮೈತ್ರಿಕೂಟದ ನಾಯಕರು ಭಾನುವಾರ ರ‍್ಯಾಲಿ ನಡೆಸಿ ಶಕ್ತಿ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಈ ರೀತಿ ವಾಗ್ದಾಳಿ ನಡೆಸಿದ್ದು, 'ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುತ್ತಿರುವುದರಿಂದ ಕೆಲವರು ವಿಚಲಿತರಾಗಿದ್ದಾರೆ.

ನನ್ನ ದೇಶವನ್ನು ಭ್ರಷ್ಟರಿಂದ ರಕ್ಷಿಸಲು ನಾನು ದೊಡ್ಡ ಯುದ್ಧವನ್ನು ನಡೆಸುತ್ತಿದ್ದೇನೆ. ಅದಕ್ಕಾಗಿಯೇ ಅವರು ಇಂದು ಜೈಲಿನಲ್ಲಿದ್ದಾರೆ ಮತ್ತು ಸುಪ್ರೀಂ ಕೋರ್ಟ್‌ನಿಂದಲೂ ಜಾಮೀನು ಪಡೆಯುತ್ತಿಲ್ಲ. ಈ ಚುನಾವಣೆ ಎರಡು ಬಣಗಳ ನಡುವಿನ ಹೋರಾಟ. ಒಂದು ಕಡೆ ಭ್ರಷ್ಟಾಚಾರ ನಿರ್ಮೂಲನೆಗೆ ಎನ್‌ಡಿಎ ಬದ್ಧವಾಗಿದ್ದರೆ, ಮತ್ತೊಂದೆಡೆ ಭ್ರಷ್ಟ ನಾಯಕರನ್ನು ರಕ್ಷಿಸುವತ್ತ ʼಇಂಡಿಯಾʼ ಮೈತ್ರಿಕೂಟ ಗಮನ ಹರಿಸಿದೆ. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕೇ ಅಥವಾ ಬೇಡವೇ ಎಂಬುದನ್ನು ನೀವು ನಿರ್ಧರಿಸಬೇಕು ಎಂದು ಹೇಳಿದರು.

ಭ್ರಷ್ಟರು ನನ್ನ ಮೇಲೆ ಎಷ್ಟೇ ದಾಳಿ ಮಾಡಿದರೂ ಸುಮ್ಮನಿರುವುದಿಲ್ಲ. ಭ್ರಷ್ಟರು ಎಷ್ಟೇ ದೊಡ್ಡವರಾಗಿರಲಿ ಖಂಡಿತವಾಗಿಯೂ ಕ್ರಮ ಕೈಗೊಳ್ಳಲಾಗುವುದು. ದೇಶವನ್ನು ಲೂಟಿ ಮಾಡಿದವನು ಅದನ್ನು ಹಿಂದಿರುಗಿಸಲೇ ಬೇಕಾಗುತ್ತದೆ. ಇದು ಮೋದಿ ನೀಡುವ ಗ್ಯಾರಂಟಿ” ಎಂದು ಭರವಸೆ ನೀಡಿದ್ದಾರೆ. ʼʼಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ತಮ್ಮ ಸರ್ಕಾರ ಸಿದ್ಧಪಡಿಸುತ್ತಿದೆ. ಬಡವರ ಪ್ರತಿಯೊಂದು ಸಮಸ್ಯೆಯನ್ನು ಪರಿಹರಿಸಲು ಯೋಜನೆಗಳನ್ನು ಸಿದ್ಧ ಪಡಿಸಿದ್ದೇವೆ. ನಾವು ಬಡವರನ್ನು ಸಬಲೀಕರಣಗೊಳಿಸಿದ್ದೇವೆ ಮಾತ್ರವಲ್ಲ, ಅವರ ಆತ್ಮಗೌರವವನ್ನೂ ಮರಳಿ ನೀಡಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com