ತೆಲಂಗಾಣ ಸಿಎಂನಿಂದ ಕಾಂಗ್ರೆಸ್ ಹೈಕಮಾಂಡ್‌ಗೆ 2,500 ಕೋಟಿ ರೂ.: ಕೆಟಿ ರಾಮರಾವ್ ವಿರುದ್ಧ ಪ್ರಕರಣ

ಲೋಕಸಭೆ ಚುನಾವಣೆ ಸಲುವಾಗಿ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಕಾಂಗ್ರೆಸ್ ಹೈಕಮಾಂಡ್‌ಗೆ 2,500 ಕೋಟಿ ರೂ. ಕಳುಹಿಸಿದ್ದಾರೆ ಎಂದು ಆರೋಪಿಸಿರುವ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ವಿರುದ್ಧ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್
ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್

ಹೈದರಾಬಾದ್: ಲೋಕಸಭೆ ಚುನಾವಣೆ ಸಲುವಾಗಿ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಕಾಂಗ್ರೆಸ್ ಹೈಕಮಾಂಡ್‌ಗೆ 2,500 ಕೋಟಿ ರೂ. ಕಳುಹಿಸಿದ್ದಾರೆ ಎಂದು ಆರೋಪಿಸಿರುವ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ವಿರುದ್ಧ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಾಂಗ್ರೆಸ್ ಮುಖಂಡರೊಬ್ಬರು ನೀಡಿರುವ ದೂರಿನ ಮೇರೆಗೆ ಹನಮಕೊಂಡ ಪೊಲೀಸ್ ಠಾಣೆಯಲ್ಲಿ ಕೆಟಿಆರ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಹೈದರಾಬಾದ್‌ನ ಬಂಜಾರಾ ಹಿಲ್ಸ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

ಹನಮಕೊಂಡ ಪೊಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ರಾವ್ ಎಂಬುವವರು ದೂರು ನೀಡಿದ್ದರು.

ಕೆಟಿಆರ್ ಎಂದೇ ಜನಪ್ರಿಯರಾಗಿರುವ ರಾಮರಾವ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಶಾಂತಿಗೆ ಭಂಗ ತರುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು 505 (ಸಾರ್ವಜನಿಕ ಕಿಡಿಗೇಡಿತನವನ್ನು ಉಂಟುಮಾಡುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್
ಕೆಸಿಆರ್, ಮಮತಾ, ಕೇಜ್ರಿವಾಲ್ ರಂತಹ ಪ್ರಾದೇಶಿಕ ನಾಯಕರಿಂದ ಮಾತ್ರ ಬಿಜೆಪಿ ಸೋಲಿಸಲು ಸಾಧ್ಯ: ರಾಮರಾವ್

ಕಳೆದ ಮಂಗಳವಾರ ನಡೆದ ಬಿಆರ್‌ಎಸ್ ಮುಖಂಡರ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಮರಾವ್, ರೇವಂತ್ ರೆಡ್ಡಿ ಅವರು ರಾಜ್ಯದ ಉದ್ಯಮಿಗಳಿಂದ ಹಣ ವಸೂಲಿ ಮಾಡಿ ದೆಹಲಿ ಹೈಕಮಾಂಡ್‌ಗೆ ರವಾನಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಮುಂಬರುವ ಲೋಕಸಭಾ ಚುನಾವಣೆಗಾಗಿ ರೇವಂತ್ ರೆಡ್ಡಿ ಅವರು ಈಗಾಗಲೇ ದೆಹಲಿಗೆ 2,500 ಕೋಟಿ ರೂ. ಗಳನ್ನು ರವಾನಿಸಿದ್ದಾರೆ. ಅಷ್ಟು ದೊಡ್ಡ ಮೊತ್ತ ಸಂಗ್ರಹಿಸಲು, ರೇವಂತ್ ರೆಡ್ಡಿ ಅವರು ಕಳೆದ ಮೂರು ತಿಂಗಳಿನಿಂದ ಕಟ್ಟಡಗಳು ಮತ್ತು ಲೇಔಟ್‌ಗಳಿಗೆ ಅನುಮತಿ ನೀಡುವಿಕೆಯನ್ನು ಸ್ಥಗಿತಗೊಳಿಸಿದ್ದಾರೆ. ಅನುಮೋದನೆ ನಿರಾಕರಣೆ ಬೆದರಿಕೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳ ಮೇಲೆ ಹಣಕ್ಕಾಗಿ ಒತ್ತಡ ಹೇರಿದ್ದಾರೆ ಎಂದು ಕೆಟಿಆರ್ ಆರೋಪಿಸಿದ್ದರು. ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com