ದೆಹಲಿ ಮಹಿಳಾ ಆಯೋಗದ 223 ನೌಕರರ ವಜಾ!

ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಆದೇಶದ ಮೇರೆಗೆ ದೆಹಲಿ ಮಹಿಳಾ ಆಯೋಗದ 223 ನೌಕರರನ್ನು ಕೂಡಲೇ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ.
ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ, ಸ್ವಾತಿ ಮಲಿವಾಲ್
ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ, ಸ್ವಾತಿ ಮಲಿವಾಲ್

ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಆದೇಶದ ಮೇರೆಗೆ ದೆಹಲಿ ಮಹಿಳಾ ಆಯೋಗದ 223 ನೌಕರರನ್ನು ಕೂಡಲೇ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ.

ದೆಹಲಿ ಮಹಿಳಾ ಆಯೋಗದ ಅಂದಿನ ಅಧ್ಯಕ್ಷೆ ಸ್ವಾತಿ ಮಲಿವಾಲ್ ನಿಯಮಗಳಿಗೆ ವಿರುದ್ಧವಾಗಿ ಹೆಚ್ಚುವರಿ ನೌಕರರನ್ನು ನೇಮಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ಮಹಿಳಾ ಆಯೋಗಕ್ಕೆ 40 ಜನರನ್ನು ಮಾತ್ರ ನೇಮಿಸಿಕೊಳ್ಳಲು ಅಧಿಕಾರವಿದೆ. ಲೆಫ್ಟಿನೆಂಟ್ ಗವರ್ನರ್ ಅನುಮೋದನೆ ಇಲ್ಲದೆ 223 ಹೊಸ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಗುತ್ತಿಗೆ ನೌಕರರನ್ನು ನೇಮಿಸಿಕೊಳ್ಳುವ ಅಧಿಕಾರ ಆಯೋಗಕ್ಕೆ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ, ಸ್ವಾತಿ ಮಲಿವಾಲ್
'ಮಣಿಪುರ ಭೇಟಿಗೆ ಸರ್ಕಾರದಿಂದಲೇ ಅಡ್ಡಿ': ದೆಹಲಿ ಮಹಿಳಾ ಆಯೋಗ ಮುಖ್ಯಸ್ಥರ ಗಂಭೀರ ಆರೋಪ

ಹಣಕಾಸು ಇಲಾಖೆಯ ಅನುಮೋದನೆಯಿಲ್ಲದೆ ಸರ್ಕಾರಕ್ಕೆ ಹೆಚ್ಚುವರಿ ವೆಚ್ಚುವನ್ನುಂಟು ಮಾಡುವ ಯಾವುದೇ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ಆಯೋಗಕ್ಕೆ ತಿಳಿಸಲಾಗಿದೆ ಎಂದು ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com