ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಲಿ ಸಂಸದ ಮತ್ತು ಮಾಜಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಬಿಜೆಪಿ ಈ ಬಾರಿ ಟಿಕೆಟ್ ನಿರಾಕರಿಸಿದ್ದು, ಉತ್ತರ ಪ್ರದೇಶದ ಕೇಸರ್‌ಗಂಜ್ ಕ್ಷೇತ್ರದಿಂದ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಅವರನ್ನು ಕಣಕ್ಕಿಳಿಸಿದೆ ಎಂದು ಮೂಲಗಳು ತಿಳಿಸಿವೆ.
ಐದನೇ ಹಂತದಲ್ಲಿ ಮೇ 20 ರಂದು ಕೇಸರ್‌ಗಂಜ್ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಮೇ 3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಟಿಕೆಟ್ ನಿರಾಕರಿಸಲಾಗುತ್ತಿದೆ. ಆದರೆ ಕೇಸರ್‌ಗಂಜ್ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿರುವ ಠಾಕೂರ್ ನಾಯಕನ ಕುಟುಂಬದಲ್ಲಿ ಒಬ್ಬರಿಗೆ ಕೇಸರಿ ಪಕ್ಷ ಟಿಕೆಟ್ ನೀಡಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಬ್ರಿಜ್ ಭೂಷಣ್ ಶರಣ್ ಅವರ ಕಿರಿಯ ಪುತ್ರ ಹಾಗೂ ಉತ್ತರ ಪ್ರದೇಶ ಕುಸ್ತಿ ಫೆಡರೇಷನ್ನ ಅಧ್ಯಕ್ಷ ಕರಣ್ ಭೂಷಣ್ ಶರಣ್ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಸತತ ಐದು ಬಾರಿ ಗೆದ್ದಿರುವ ಗಾಂಧಿ ಕುಟುಂಬದ ಭದ್ರಕೋಟೆಯಾದ ರಾಯ್‌ಬರೇಲಿಯಿಂದ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಬಿಜೆಪಿ ತನ್ನ ಅಭ್ಯರ್ಥಿ ಎಂದು ಘೋಷಿಸಿದೆ. ಕಾಂಗ್ರೆಸ್ ಇನ್ನೂ ಈ ಸ್ಥಾನಕ್ಕೆ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ.
Advertisement