ಸಿಬಿಐ ಕೇಂದ್ರದ ನಿಯಂತ್ರಣದಲ್ಲಿಲ್ಲ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ಸಿಬಿಐ ಕೇಂದ್ರದ ನಿಯಂತ್ರಣದಲ್ಲಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ. ಹಲವಾರು ಪ್ರಕರಣಗಳಲ್ಲಿ ರಾಜ್ಯದ ಪೂರ್ವಾಪೇಕ್ಷಿತ ಒಪ್ಪಿಗೆಯಿಲ್ಲದೆ ಕೇಂದ್ರ ತನಿಖೆ ಮುಂದುವರೆಸುತ್ತಿದೆ ಎಂಬ ಪಶ್ಚಿಮ ಬಂಗಾಳದ ಆಕ್ಷೇಪಣೆ ಕುರಿತು ಅರ್ಜಿ ವಿಚಾರಣೆ ವೇಳೆಯಲ್ಲಿ ಕೇಂದ್ರ ಸರ್ಕಾರ ಈ ರೀತಿಯ ಸ್ಪಷ್ಟೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಸಿಬಿಐ ಕೇಂದ್ರದ ನಿಯಂತ್ರಣದಲ್ಲಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ. ಹಲವಾರು ಪ್ರಕರಣಗಳಲ್ಲಿ ರಾಜ್ಯದ ಪೂರ್ವಾಪೇಕ್ಷಿತ ಒಪ್ಪಿಗೆಯಿಲ್ಲದೆ ಕೇಂದ್ರ ತನಿಖೆ ಮುಂದುವರೆಸುತ್ತಿದೆ ಎಂಬ ಪಶ್ಚಿಮ ಬಂಗಾಳದ ಆಕ್ಷೇಪಣೆ ಕುರಿತು ಅರ್ಜಿ ವಿಚಾರಣೆ ವೇಳೆಯಲ್ಲಿ ಕೇಂದ್ರ ಸರ್ಕಾರ ಈ ರೀತಿಯ ಸ್ಪಷ್ಟೆ ನೀಡಿದೆ.

ಸಂವಿಧಾನದ 131 ನೇ ವಿಧಿಯ ಅಡಿಯಲ್ಲಿ ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೂಲ ದಾವೆ ಹೂಡಿರುವ ಪಶ್ಚಿಮ ಬಂಗಾಳ ಸರ್ಕಾರ, ರಾಜ್ಯವು ಸಾಮಾನ್ಯ ಒಪ್ಪಿಗೆಯನ್ನು ಹಿಂಪಡೆದಿದ್ದರೂ ಸಹ ಸಿಬಿಐ ಅದರ ಪ್ರಾದೇಶಿಕ ನ್ಯಾಯವ್ಯಾಪ್ತಿಯಲ್ಲಿ ಪ್ರಕರಣಗಳನ್ನು ತನಿಖೆ ಮಾಡಲು ಎಫ್‌ಐಆರ್‌ಗಳನ್ನು ದಾಖಲಿಸುತ್ತಿದೆ ಮತ್ತು ಅದರ ತನಿಖೆಯನ್ನು ಮುಂದುವರಿಸುತ್ತಿದೆ ಎಂದು ಆರೋಪಿಸಿದೆ.

ಸಾಂದರ್ಭಿಕ ಚಿತ್ರ
ಸಿಬಿಐ, ಇ.ಡಿ ಸೇರಿ ಕೇಂದ್ರೀಯ ಸಂಸ್ಥೆಗಳ ವಿರುದ್ಧ ಮೊದಲ ಬಾರಿಗೆ ನಿರ್ಣಯ ಮಂಡಿಸಿದ ರಾಜ್ಯ ಪಶ್ಚಿಮ ಬಂಗಾಳ

"ಭಾರತೀಯ ಒಕ್ಕೂಟವು ಯಾವುದೇ ಪ್ರಕರಣವನ್ನು ದಾಖಲಿಸಿಲ್ಲ. ಸಿಬಿಐ ಅದನ್ನು ದಾಖಲಿಸಿದೆ, "ಸಿಬಿಐ ಭಾರತದ ಒಕ್ಕೂಟದ ನಿಯಂತ್ರಣದಲ್ಲಿಲ್ಲಎಂದು ಮೆಹ್ತಾ ಹೇಳಿದರು. ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ನವೆಂಬರ್ 16, 2018 ರಂದು, ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯದಲ್ಲಿ ತನಿಖೆ ನಡೆಸಲು ಅಥವಾ ದಾಳಿಗಳನ್ನು ನಡೆಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಿದ್ದ "ಸಾಮಾನ್ಯ ಒಪ್ಪಿಗೆ" ಯನ್ನು ಹಿಂಪಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com