ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧೆ ರಾಹುಲ್ ಗೆ ಇಷ್ಟವಿಲ್ಲ: ಮೂಲಗಳು

ಮೂರನೇ ಹಂತದ ಲೋಕಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದ್ದು, ಅಮೇಥಿ ಮತ್ತು ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನ ಉನ್ನತ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸುತ್ತಾರೆಯೇ ಎಂಬ ಸಸ್ಪೆನ್ಸ್ ಮುಂದುವರೆದಿದೆ.
ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ
ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ
Updated on

ನವದೆಹಲಿ: ಮೂರನೇ ಹಂತದ ಲೋಕಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದ್ದು, ಅಮೇಥಿ ಮತ್ತು ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನ ಉನ್ನತ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸುತ್ತಾರೆಯೇ ಎಂಬ ಸಸ್ಪೆನ್ಸ್ ಮುಂದುವರೆದಿದೆ. ಅಮೇಥಿ ಮತ್ತು ರಾಯ್ ಬರೇಲಿ ಕ್ಷೇತ್ರವನ್ನು ಗಾಂಧಿ-ನೆಹರೂ ಕುಟುಂಬದ ಸಾಂಪ್ರದಾಯಿಕ ಕ್ಷೇತ್ರಗಳು ಎಂದು ಪರಿಗಣಿಸಲಾಗುತ್ತದೆ ಏಕೆಂದರೆ ಹಲವಾರು ದಶಕಗಳಿಂದ ಅವರ ಮನೆತನದವರು ಇಲ್ಲಿ ಸ್ಪರ್ಧಿಸುತ್ತಾ ಬಂದಿದ್ದಾರೆ.

ರಾಹುಲ್ ಗಾಂಧಿ ರಾಯ್ ಬರೇಲಿಯಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ, ಆದಾಗ್ಯೂ, ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಪ್ರಿಯಾಂಕಾ ಗಾಂಧಿ ಕೂಡ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ, ಆದರೆ ಕಾಂಗ್ರೆಸ್ ನಾಯಕತ್ವದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರ ಕುಟುಂಬ ರಾಜಕಾರಣ ಟೀಕೆಗಳನ್ನು ಪರಿಗಣಿಸಿ ರಾಹುಲ್ ಗಾಂಧಿ ಈ ಆಲೋಚನೆ ಅನುಕೂಲಕರವಾಗಿಲ್ಲ ಎಂದು ಹೇಳಿದ್ದಾರೆ.

ಗಾಂಧಿ ಕುಟುಂಬದ ಮೂವರೂ ಸಂಸತ್ತಿನಲ್ಲಿ ಇರುವುದನ್ನು ಅವರು ಬಯಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಎರಡು ಸ್ಥಾನಗಳಿಗೆ ಉಮೇದುವಾರಿಕೆ ಕುರಿತು ಚರ್ಚಿಸಲು ಬುಧವಾರ ಸಭೆ ನಡೆಸಲಾಯಿತು ಆದರೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ. ಗಾಂಧಿ ಕುಟುಂಬದ ಸದಸ್ಯರು ಅಮೇಥಿ ಮತ್ತು ರಾಯ್ ಬರೇಲಿ ಕ್ಷೇತ್ರಗಳಿಂದ ಸ್ಪರ್ಧಿಸುತ್ತಾರೆ ಎಂದು ಜನರು ನಿರೀಕ್ಷಿಸುತ್ತಿದ್ದಾರೆ ಎಂದು ಗಾಂಧಿಯವರ ಆಪ್ತರಾದ ಕೆ ಎಲ್ ಶರ್ಮಾ ಹೇಳಿದ್ದಾರೆ.

ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ
ಅಮೇಥಿ, ರಾಯ್ ಬರೇಲಿ ಅಭ್ಯರ್ಥಿಗಳ ಆಯ್ಕೆ 24-30 ಗಂಟೆಗಳಲ್ಲಿ ಅಂತಿಮ: ಕಾಂಗ್ರೆಸ್

ಮೇ 3 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುವುದರಿಂದ ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಹೆಚ್ಚುತ್ತಿರುವ ಸಸ್ಪೆನ್ಸ್ ನಡುವೆ "ಯಾರೂ ಹೆದರುವ ಅವಶ್ಯಕತೆಯಿಲ್ಲ" ಮತ್ತು ಮುಂದಿನ 24-30 ಗಂಟೆಗಳಲ್ಲಿ ಈ ವಿಷಯದ ಬಗ್ಗೆ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಅಮೇಥಿ ಮತ್ತು ರಾಯ್ ಬರೇಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷದ ಕೇಂದ್ರ ಚುನಾವಣಾ ಸಮಿತಿಯು (ಸಿಇಸಿ) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡಿದೆ. ಮುಂದಿನ 24-30 ಗಂಟೆಗಳಲ್ಲಿ ಕಾಂಗ್ರೆಸ್ ಅಧ್ಯಕ್ಷರು ಅಂತಿಮಗೊಳಿಸುತ್ತಾರೆ ಮತ್ತು ಅವರು ತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com