
ಧರ್ಮಶಾಲಾ: ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರ ಸೋದರಸಂಬಂಧಿ ಹಿಟ್ ಅಂಡ್ ರನ್ ಘಟನೆಯಲ್ಲಿ ಸಾವನ್ನಪ್ಪಿದ್ದು, ಅದೇ ಸ್ಕೂಟರ್ ನಲ್ಲಿದ್ದ ಮತ್ತೊಬ್ಬ ವ್ಯಕ್ತಿಯ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ರೈನಾ ಅವರ ಸೋದರ ಸಂಬಂಧಿ ಸೌರಭ್ ಕುಮಾರ್ ಮತ್ತು ಅವರ ಸ್ನೇಹಿತ ಕುಠ್ಮಾನ್‌ನ ಶುಭಂ ಅವರು ತೆರಳುತ್ತಿದ್ದ ಸ್ಕೂಟರ್ ಗೆ ಬುಧವಾರ ಗಗ್ಗಲಿ ವಿಮಾನ ನಿಲ್ದಾಣದ ಬಳಿ ಕಾರು ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಗಗ್ಗಲ್‌ನ ಹಿಮಾಚಲ ಟಿಂಬರ್ ಬಳಿ ಬುಧವಾರ ರಾತ್ರಿ 11:30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಕಂಗ್ರಾ ಪೊಲೀಸ್ ವರಿಷ್ಠಾಧಿಕಾರಿ ಶಾಲಿನಿ ಅಗ್ನಿಹೋತ್ರಿ ಅವರು ತಿಳಿಸಿದ್ದಾರೆ.
ಪೋಲೀಸರ ಪ್ರಕಾರ, ಕಾರಿನ ಚಾಲಕ ಶೇರ್ ಸಿಂಗ್ ಬೈಕ್ ಗೆ ಡಿಕ್ಕಿ ಹೊಡೆಸಿ, ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಘಟನೆ ನಂತರ ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಶೇರ್ ಸಿಂಗ್ ಅವರನ್ನು ಮಂಡಿಯಲ್ಲಿ ಬಂಧಿಸಲಾಗಿದೆ.
ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 (ಅತಿ ವೇಗದ ಚಾಲನೆ) ಮತ್ತು 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 187 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement