ಅಮೇಥಿಯಿಂದ ಹಿಂದೆ ಸರಿದ ರಾಹುಲ್: ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ- ಸ್ಮೃತಿ ಇರಾನಿ

ಅಮೇಥಿಯಿ ಕ್ಷೇತ್ರದಿಂದ ರಾಹುಲ್ ಗಾಂಧಿ ಹಿಂದೆ ಸರಿದ ಬೆನ್ನಲ್ಲೇ, ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಹೇಳಿದ್ದಾರೆ.
ರಾಹುಲ್ ಗಾಂಧಿ, ಸ್ಮೃತಿ ಇರಾನಿ
ರಾಹುಲ್ ಗಾಂಧಿ, ಸ್ಮೃತಿ ಇರಾನಿ

ನವದೆಹಲಿ: ಅಮೇಥಿ ಕ್ಷೇತ್ರದಿಂದ ರಾಹುಲ್ ಗಾಂಧಿ ಹಿಂದೆ ಸರಿದ ಬೆನ್ನಲ್ಲೇ, ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಹೇಳಿದ್ದಾರೆ.

ಕಾಂಗ್ರೆಸ್ ನಿಷ್ಠಾವಂತ ಕೆ.ಎಲ್.ಶರ್ಮಾಈ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಈ ಕ್ಷೇತ್ರದಲ್ಲಿ ಗೆಲುವಿನ ಅವಕಾಶವಿದೆ ಎಂದು ರಾಹುಲ್ ಗಾಂಧಿ ಭಾವಿಸಿದ್ದರೆ, ಇಲ್ಲಿಂದ ಸ್ಪರ್ಧಿಸುತ್ತಿದ್ದರು. ಸೋಲಿನ ಅರಿವಾಗಿ ಅವರ ಆಪ್ತರನ್ನು ಕಣಕ್ಕಿಳಿಸಿದ್ದಾರೆ. ಮೇ 20 ರಂದು ನಡೆಯಲಿರುವ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸುವುದಾಗಿ ಅವರು ಪ್ರತಿಪಾದಿಸಿದರು.

ರಾಹುಲ್ ಗಾಂಧಿ, ಸ್ಮೃತಿ ಇರಾನಿ
LokSabha Election 2024: ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ; ಸೋನಿಯಾ, ಖರ್ಗೆ ಉಪಸ್ಥಿತಿ!

ಅಮೇಥಿಯಿಂದ ಕ್ಷೇತ್ರದಿಂದ ರಾಹುಲ್ ಗಾಂಧಿ ಹಿಂದೆ ಸರಿದ ಬೆನ್ನಲ್ಲೇ, ಲೋಕಸಭಾ ಚುನಾವಣೆಗೂ ಮುನ್ನಾವೇ ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಹೇಳಿದ್ದಾರೆ.

ಅಮೇಥಿ ಜನರು ನರೇಂದ್ರ ಮೋದಿ ಸರ್ಕಾರದಡಿ ಅಭಿವೃದ್ಧಿಯನ್ನು ಕಂಡಿದ್ದಾರೆ, ಕಳೆದ 50 ವರ್ಷಗಳಲ್ಲಿ ಇದು ಏಕೆ ಆಗಲಿಲ್ಲ ಎಂದು ಅಶ್ಚರ್ಯ ವ್ಯಕ್ತಪಡಿಸಿದ ಅವರು, ಈ ಪ್ರದೇಶದಲ್ಲಿ ಗಾಂಧಿ ಕುಟುಂಬದಲ್ಲಿ ಏಕೆ ಹೆಚ್ಚಿನ ಹಾನಿಯನ್ನುಂಟು ಮಾಡಿದರು ಎಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದು ಇರಾನಿ ಕೇಳಿದರು.

ರಾಹುಲ್ ಗಾಂಧಿ, ಸ್ಮೃತಿ ಇರಾನಿ
ಚುನಾವಣಾ ಕಣದಿಂದ ಓಡಿಹೋಗುವವರು ದೇಶ ಮುನ್ನಡೆಸಲು ಬಯಸುತ್ತಾರೆ: ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ

ಚುನಾವಣೆ ನಂತರ ರಾಹುಲ್ ಗಾಂಧಿ ಹೊಸ ಕ್ಷೇತ್ರ ನೋಡಿಕೊಳ್ಳಬೇಕಾಗುತ್ತದೆ ಎಂದು ವಯನಾಡಿದಲ್ಲಿ ಪ್ರಧಾನಿ ಮೋದಿ ಈಗಾಗಲೇ ಭವಿಷ್ಯ ನುಡಿದಿದ್ದಾರೆ. ಇಂದು ಅದು ಸಂಭವಿಸುವುದನ್ನು ನೀವು ನೋಡುತ್ತಿದ್ದೀರಿ" ಎಂದು ಇರಾನಿ ಹೇಳಿದರು. ರಾಹುಲ್ ಗಾಂಧಿ ಕೇರಳದ ವಯನಾಡ್ ನಿಂದ ಹಾಲಿ ಸಂಸದರಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com