ರಾಯ್ ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆಎಲ್ ಶರ್ಮಾ ಸ್ಪರ್ಧೆ: ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಸೀಮಿತ!

ಕುಟುಂಬದ ಭದ್ರಕೋಟೆಯಾದ ರಾಯಬರೇಲಿಯಿಂದ ಸಂಸದ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದು, ಹಿರಿಯ ನಾಯಕ ಕೆಎಲ್ ಶರ್ಮಾ ಅಮೇಥಿಯಿಂದ ಕಣಕ್ಕಿಳಿಯಲಿದ್ದಾರೆ.
ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ
ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ
Updated on

ನವದೆಹಲಿ: ಕುಟುಂಬದ ಭದ್ರಕೋಟೆಯಾದ ರಾಯಬರೇಲಿಯಿಂದ ಸಂಸದ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದು, ಹಿರಿಯ ನಾಯಕ ಕೆಎಲ್ ಶರ್ಮಾ ಅಮೇಥಿಯಿಂದ ಕಣಕ್ಕಿಳಿಯಲಿದ್ದಾರೆ. ಪ್ರತಿಷ್ಠಿತ ಸ್ಥಾನಗಳಿಗೆ ನಾಮಪತ್ರ ಸಲ್ಲಿಸುವ ಕೆಲವೇ ಗಂಟೆಗಳ ಮೊದಲು ಘೋಷಣೆಯಾಗಿದೆ.

ಲೋಕಸಭೆ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಹೊಸ ತಂತ್ರಗಾರಿಕೆಯನ್ನ ನಡೆಸಿದೆ. ಲೋಕಸಭಾ ಚುನಾವಣೆಯಲ್ಲಿ ಈಗಾಗಲೇ ವಯನಾಡಿನಿಂದ ಸ್ಪರ್ಧಿಸಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಇದೀಗ ರಾಯ್​ಬರೇಲಿಯಿಂದಲೂ ಕಣಕ್ಕಿಳಿದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನಾಮಪತ್ರ ಸಲ್ಲಿಸುವ ಗಡುವು ಇಂದು ಮಧ್ಯಾಹ್ನ 3 ಗಂಟೆಗೆ ಕೊನೆಗೊಳ್ಳಲಿದೆ. ಎರಡೂ ಸ್ಥಾನಗಳನ್ನು ಗಾಂಧಿ-ನೆಹರು ಕುಟುಂಬದ ಸಾಂಪ್ರದಾಯಿಕ ಭದ್ರಕೋಟೆ ಎಂದು ಪರಿಗಣಿಸಲಾಗುತ್ತದೆ ಏಕೆಂದರೆ ಗಾಂಧಿ ಕುಟುಂಬಸ್ಥರು ಹಲವಾರು ದಶಕಗಳಿಂದ ಈ ಕ್ಷೇತ್ರಗಳನ್ನು ಪ್ರತಿನಿಧಿಸಿದ್ದಾರೆ. ರಾಯ್​ ಬರೇಲಿಯಲ್ಲಿ ಮೇ 20ರಂದು ಮತದಾನ ನಡೆಯಲಿದೆ. ಇನ್ನೂ ಇಷ್ಟು ದಿನಗಳ ಕಾಲ ಸಾಕಷ್ಟು ಕುತೂಹಲ ಮೂಡಿಸಿದ್ದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ವಿಚಾರಕ್ಕೆ ಇಂದು ತೆರೆ ಬಿದಿದ್ದು, ಪ್ರಿಯಾಂಕಾ ಗಾಂಧಿ ಎಲ್ಲೂ ಸ್ಪರ್ಧಿಸುತ್ತಿಲ್ಲ ಎಂಬುದು ತಿಳಿದುಬಂದಿದೆ.

ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ
ಚುನಾವಣಾ ಕಣದಿಂದ ಓಡಿಹೋಗುವವರು ದೇಶ ಮುನ್ನಡೆಸಲು ಬಯಸುತ್ತಾರೆ: ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ

ಈ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ರಾಯ್ಬರೇಲಿಯಿಂದ ಚುನಾವಣಾ ಪಾದಾರ್ಪಣೆ ಮಾಡಬಹುದೆಂದು ಊಹಿಸಲಾಗಿತ್ತು. ಆದರೆ, ಪ್ರಿಯಾಂಕಾ ಪ್ರಚಾರದತ್ತ ಗಮನ ಹರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ ಅಮೇಥಿಯಿಂದ ಮತ್ತು ಪ್ರಿಯಾಂಕಾ ಗಾಂಧಿ ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿತ್ತು.

ರಾಯ್ ಬರೇಲಿ ಸಂಸದರಾಗಿ ಸತತ ನಾಲ್ಕು ಬಾರಿ ಸೇವೆ ಸಲ್ಲಿಸಿದ ನಂತರ, ಮಾಜಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ರಾಯ್‌ಬರೇಲಿ ಕ್ಷೇತ್ರವು ಕಾಂಗ್ರೆಸ್‌ಗೆ ಪ್ರತಿಷ್ಠಿತ ಕ್ಷೇತ್ರವಾಗಿದೆ ಏಕೆಂದರೆ ಇದನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಮೂರು ಬಾರಿ ಮತ್ತು ಇಂದಿರಾ ಅವರ ಪತಿ ಫಿರೋಜ್ ಗಾಂಧಿಯವರು 1952 ಮತ್ತು 1957 ರಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಸೋನಿಯಾ ಗಾಂಧಿ 2004 ರಿಂದ 2024 ರವರೆಗೆ ಪ್ರತಿನಿಧಿಸಿದ್ದರು.

ರಾಹುಲ್ ಗಾಂಧಿಯವರು 2004 ರಿಂದ 2019 ರವರೆಗೆ ಮೂರು ಬಾರಿ ಅಮೇಥಿಯನ್ನು ಪ್ರತಿನಿಧಿಸಿದ್ದರು ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು 50,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದರು. ಇರಾನಿ ವಿರುದ್ಧ ಗಾಂಧಿ ಕುಟುಂಬದ ಆಪ್ತ ಕೆಎಲ್ ಶರ್ಮಾ ಕಣಕ್ಕಿಳಿದಿದ್ದಾರೆ. ಮೇ 20 ರಂದು ಐದನೇ ಹಂತದಲ್ಲಿ ಅಮೇಥಿ ಮತ್ತು ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಿಗದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com