ಮೇಘಾಲಯ: ಅತ್ಯಾಚಾರ ಯತ್ನದ ಆರೋಪದ ಮೇಲೆ ಇಬ್ಬರನ್ನು ಹೊಡೆದು ಕೊಂದ ಜನ!

ಮೇಘಾಲಯದ ಪೂರ್ವ ಪಶ್ಚಿಮ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ 18 ವರ್ಷದ ಯುವತಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಜನರ ಗುಂಪು ಇಬ್ಬರನ್ನು ಹೊಡೆದು ಕೊಂದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಶ್ಚಿಮ ಖಾಸಿ ಹಿಲ್ಸ್: ಮೇಘಾಲಯದ ಪೂರ್ವ ಪಶ್ಚಿಮ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ 18 ವರ್ಷದ ಯುವತಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಜನರ ಗುಂಪು ಇಬ್ಬರನ್ನು ಹೊಡೆದು ಕೊಂದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರ ಕಛೇರಿ ಮೈರಾಂಗ್ ಬಳಿಯ ನಾಂಗ್ತ್ಲಿವ್ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಇಬ್ಬರು ತನ್ನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಆಕೆಯ ಕಿರುಚಾಟ ಕೇಳಿ ನೆರೆಹೊರೆಯವರು ಸ್ಥಳದಲ್ಲಿ ಜಮಾಯಿಸಿ ಇಬ್ಬರನ್ನು ಹಿಡಿದು ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಮಾಜಿ ಸೈನಿಕನಿಗೆ ಗುಂಡಿಕ್ಕಿ ಹತ್ಯೆ: ಇಬ್ಬರು ಶಸ್ತ್ರಸಜ್ಜಿತ ದಾಳಿಕೋರರನ್ನು ಹೊಡೆದು ಕೊಂದ ಜನ!

ನಂತರ ಜನರ ಗುಂಪು ಅವರನ್ನು ಸಮೀಪದ ಸಮುದಾಯ ಭವನಕ್ಕೆ ಕರೆದೊಯ್ದು ಹಲ್ಲೆ ನಡೆಸಿದೆ. ಪೊಲೀಸರು ಅವರನ್ನು ರಕ್ಷಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದ್ದಾರೆ.

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರಲ್ಲಿ ಒಬ್ಬರು ಟಿರೋಟ್ ಸಿಂಗ್ ಸ್ಮಾರಕ ಸಿವಿಲ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಮತ್ತೊಬ್ಬರು ಶಿಲ್ಲಾಂಗ್ ಸಿವಿಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com