
ನವದೆಹಲಿ: ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ, ಮಾಜಿ ನಗರಾಡಳಿತ ಸಚಿವ ರಾಜ್ ಕುಮಾರ್ ಚೌಹಾಣ್ ಮತ್ತು ಮಾಜಿ ಶಾಸಕರಾದ ನೀರಜ್ ಬಸೋಯಾ ಹಾಗೂ ನಸೀಬ್ ಸಿಂಗ್ ಸೇರಿದಂತೆ ಹಲವು ನಾಯಕರೊಂದಿಗೆ ಶನಿವಾರ ಬಿಜೆಪಿ ಸೇರ್ಪಡೆಯಾದರು.
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ ಎಲ್ಲಾ ಮಾಜಿ ಕಾಂಗ್ರೆಸ್ ನಾಯಕರು, ಲೋಕಸಭೆ ಚುನಾವಣೆಯಲ್ಲಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಜೊತೆಗಿನ ಮೈತ್ರಿಯನ್ನು ಟೀಕಿಸಿದರು.
ತಮಗೆ ಬಿಜೆಪಿ ಸೇರಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರನ್ನು ಶ್ಲಾಘಿಸಿದ ಲವ್ಲಿ, ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಮೋದಿ ಹೆಚ್ಚಿನ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಹೇಳಿದರು.
ಲವ್ಲಿ ಇತ್ತೀಚೆಗೆ ಎಎಪಿ ಜೊತೆಗಿನ ಮೈತ್ರಿಯನ್ನು ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಲೋಕಸಭೆ ಚುನಾವಣೆಗೆ ರಾಷ್ಟ್ರ ರಾಜಧಾನಿಯಲ್ಲಿ ಕನ್ಹಯ್ಯಾ ಕುಮಾರ್ ಮತ್ತು ಉದಿತ್ ರಾಜ್ ಸೇರಿದಂತೆ ಇತರ ಕೆಲ ಅಭ್ಯರ್ಥಿಗಳ ಆಯ್ಕೆಯಿಂದ ಲವ್ವಿ ಮತ್ತು ಇತರ ಕೆಲವು ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ನಂಬಲಾಗಿದೆ.
Advertisement