ದ್ವಾರಕ ಪೂಜೆ ಪ್ರಧಾನಿ ಮೋದಿಯ ಮತ್ತೊಂದು ನಾಟಕ: ರಾಹುಲ್ ಗಾಂಧಿ ಲೇವಡಿ

ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ದ್ವಾರಕಾ ಪೂಜೆ ಅದೊಂದು ನಾಟಕ ಎಂದು ಸಂಸದ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ. ಈ ಮೂಲಕ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ.
ಸಮುದ್ರದಲ್ಲಿ ಮೋದಿ ಪೂಜೆ
ಸಮುದ್ರದಲ್ಲಿ ಮೋದಿ ಪೂಜೆ

ಪುಣೆ: ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ದ್ವಾರಕಾ ಪೂಜೆ ಅದೊಂದು ನಾಟಕ ಎಂದು ಸಂಸದ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ. ಈ ಮೂಲಕ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ.

ಪುಣೆಯ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮುದ್ರದ ಒಳಗೆ ಹೋಗಿ ಪ್ರಧಾನಿ ಮೋದಿ ಡ್ರಾಮಾ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಪ್ರಧಾನಿ ಮೋದಿಯವರು ಒಮ್ಮೆ ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ. ಮತ್ತೊಮ್ಮೆ ಸಮುದ್ರ ಒಳಗೆ ಹೋಗಿ ಅಲ್ಲಿ ಡ್ರಾಮಾ ಮಾಡುತ್ತಾರೆ. ಸಮುದ್ರಕ್ಕೆ ಇಳಿಯುತ್ತಿದ್ದಂತೆ ಅವರು ದೇವರೇ ತಮಗೇನು ಆಗದೇ ಇದ್ದರೆ ಸಾಕಪ್ಪ ಅನ್ನೋ ಭೀತಿಯಲ್ಲಿದ್ದರು. ಅವರು ಇಂತಹ ಡ್ರಾಮಾಗಳನ್ನು ಮಾಡೋದಾದರೂ ಏಕೆ? ಅವರು ರಾಜಕೀಯವನ್ನು ತಮಾಷೆಯ ವಿಚಾರ ಎಂಬಂತೆ ಬಿಂಬಿಸಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ರಾಹುಲ್‌ ಗಾಂಧಿ ಪ್ರಧಾನಿ ಮೋದಿಯವರನ್ನು ಟೀಕಿಸುವ ಭರದಲ್ಲಿ ಸನಾತನ ಧರ್ಮದ ಅಸ್ತಿತ್ವವನ್ನು ಮತ್ತೆ ಪ್ರಶ್ನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಫೆಬ್ರುವರಿ 25ರಂದು ಗುಜರಾತ್‌ನ ದ್ವಾರಕಾದಲ್ಲಿ ಅಳವಾದ ನೀರಿನಲ್ಲಿ ಮುಳುಗಿ ದ್ವಾರಕಾಧೀಶ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು.

ಸಮುದ್ರದಲ್ಲಿ ಮೋದಿ ಪೂಜೆ
ಸ್ಕೂಬಾ ಡೈವಿಂಗ್‌ ಮಾಡಿ ಪ್ರಾಚೀನ ದ್ವಾರಕಾ ನಗರದಲ್ಲಿ ಅಂಡರ್ ವಾಟರ್ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com