ತೆಲಂಗಾಣ: ಪ್ರಚಾರದ ವೇಳೆಯಲ್ಲಿ ವೃದ್ಧೆಗೆ ಕಾಂಗ್ರೆಸ್ ಅಭ್ಯರ್ಥಿ ಕಪಾಳ ಮೋಕ್ಷ! ವಿಡಿಯೋ

ತೆಲಂಗಾಣದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಟಿ.ಜೀವನ್ ರೆಡ್ಡಿ ಅವರು ಪ್ರಚಾರದ ವೇಳೆ ಮಾಜಿ ಸಚಿವರು ವೃದ್ಧೆಯ ಕಪಾಳಮೋಕ್ಷ ಮಾಡಿರುವ ವಿಡಿಯೋ ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವೃದ್ಧೆಗೆ ಕಪಾಳ ಮೋಕ್ಷ ಮಾಡಿದ ಟಿ. ಜೀವನ್ ರೆಡ್ಡಿ
ವೃದ್ಧೆಗೆ ಕಪಾಳ ಮೋಕ್ಷ ಮಾಡಿದ ಟಿ. ಜೀವನ್ ರೆಡ್ಡಿ
Updated on

ಹೈದರಾಬಾದ್: ತೆಲಂಗಾಣದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಟಿ.ಜೀವನ್ ರೆಡ್ಡಿ ಅವರು ಹಿರಿಯ ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ. ಪ್ರಚಾರದ ವೇಳೆ ಮಾಜಿ ಸಚಿವರು ವೃದ್ಧೆಯ ಕಪಾಳಮೋಕ್ಷ ಮಾಡಿರುವ ವಿಡಿಯೋ ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

ಆರ್ಮೂರ್ ವಿಧಾನಸಭಾ ಕ್ಷೇತ್ರದ ಗ್ರಾಮವೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇತರ ಕೆಲವು ಮುಖಂಡರೊಂದಿಗೆ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಮೇ 13 ರಂದು ನಡೆಯಲಿರುವ ಚುನಾವಣೆಯಲ್ಲಿ‘ಹೂವಿಗೆ ಮತ ಹಾಕುತ್ತೇನೆ’ ಎಂದು ಹೇಳಿದಾಗ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯ ಕಾರ್ಮಿಕ ಮಹಿಳೆಗೆ ಜೀವನ್ ರೆಡ್ಡಿ ಕಪಾಳಮೋಕ್ಷ ಮಾಡಿದ್ದಾರೆ.

ವೃದ್ಧೆಗೆ ಕಪಾಳ ಮೋಕ್ಷ ಮಾಡಿದ ಟಿ. ಜೀವನ್ ರೆಡ್ಡಿ
ಅಮಿತ್ ಶಾ ವಿಡಿಯೋ ತಿರುಚಿದ ಪ್ರಕರಣ: ದೆಹಲಿ ಪೊಲೀಸರಿಂದ ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ್ದರೂ ಪಿಂಚಣಿ ಸಿಗುತ್ತಿಲ್ಲ ಎಂದು ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪಿ.ವಿನಯ್ ಕುಮಾರ್ ರೆಡ್ಡಿ ವಿಧಾನಸಭೆ ಚುನಾವಣೆಯಲ್ಲಿ ಆರ್ಮೂರ್ ನಿಂದ ಸೋತಿದ್ದರು. ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಆರ್ಮೂರ್ ಕೂಡ ಒಂದು. ಕಾಂಗ್ರೆಸ್ ಪಕ್ಷ ಜೀವನ್ ರೆಡ್ಡಿ ಅವರನ್ನು ಹಾಲಿ ಸಂಸದ ಬಿಜೆಪಿಯ ಡಿ. ಅರವಿಂದ್ ವಿರುದ್ಧ ಕಣಕ್ಕಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com