ಆಂಧ್ರ ಪ್ರದೇಶ ಪೊಲೀಸ್ ಮಹಾ ನಿರ್ದೇಶಕರ ವರ್ಗಾವಣೆ ಮಾಡಿ ಇಸಿ ಆದೇಶ

ಆಂಧ್ರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ ಕೆ ವಿ ರಾಜೇಂದ್ರನಾಥ ರೆಡ್ಡಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಚುನಾವಣಾ ಆಯೋಗ ಭಾನುವಾರ ಆದೇಶ ಹೊರಡಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಿಜಯವಾಡ: ಆಂಧ್ರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ ಕೆ ವಿ ರಾಜೇಂದ್ರನಾಥ ರೆಡ್ಡಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಚುನಾವಣಾ ಆಯೋಗ ಭಾನುವಾರ ಆದೇಶ ಹೊರಡಿಸಿದೆ ಎಂದು ಮೂಲಗಳು ತಿಳಿಸಿವೆ.

ಕೆ ವಿ ರಾಜೇಂದ್ರನಾಥ ರೆಡ್ಡಿ ವರ್ಗಾವಣೆಯಿಂದ ತೆರವಾಗಿರುವ ಹುದ್ದೆಯನ್ನು ಭರ್ತಿ ಮಾಡಲು ಮಹಾನಿರ್ದೇಶಕರ ಶ್ರೇಣಿಯಲ್ಲಿರುವ ಮೂವರು ಅರ್ಹ ಐಪಿಎಸ್ ಅಧಿಕಾರಿಗಳ ಹೆಸರನ್ನು ಸೋಮವಾರದೊಳಗೆ ಸಲ್ಲಿಸುವಂತೆ ಚುನಾವಣಾ ಆಯೋಗ, ರಾಜ್ಯ ಸರ್ಕಾರಕ್ಕೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಚುನಾವಣಾ ಆಯೋಗದ ಈ ಕ್ರಮದ ಹಿಂದಿನ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ.

ಸಾಂದರ್ಭಿಕ ಚಿತ್ರ
ಆಂಧ್ರ ಪ್ರದೇಶ: 164 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!

175 ಸದಸ್ಯ ಬಲದ ಆಂಧ್ರ ಪ್ರದೇಶ ವಿಧಾನಸಭೆಗೆ ಮತ್ತು 25 ಲೋಕಸಭಾ ಸ್ಥಾನಗಳಿಗೆ ಮೇ 13 ರಂದು ಏಕಕಾಲದಲ್ಲಿ ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com