ತೇಜಸ್ವಿ ಸೂರ್ಯ 'ಗೂಂಡಾಗಿರಿ' ಮಾಡ್ತಾರೆ, ಮೀನು ತಿನ್ತಾರೆ: ತಮ್ಮದೇ ಪಕ್ಷದ ಸಂಸದನ ವಿರುದ್ಧ ಕಂಗನಾ ವಾಗ್ದಾಳಿ?

ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಅವರು ಪ್ರತಿಪಕ್ಷಗಳ ನಾಯಕರನ್ನು ತರಾಟೆಗೆ ತೆಗೆದುಕೊಳ್ಳುವ ಭರದಲ್ಲಿ ತಮ್ಮ ಪಕ್ಷದ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಪೇಚಿಗೆ ಸಿಲುಕಿದ್ದಾರೆ.
ಕಂಗನಾ
ಕಂಗನಾ
Updated on

ಶಿಮ್ಲಾ: ಬಾಲಿವುಡ್ ನಟಿ ಹಾಗೂ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಅವರು ಪ್ರತಿಪಕ್ಷಗಳ ನಾಯಕರನ್ನು ತರಾಟೆಗೆ ತೆಗೆದುಕೊಳ್ಳುವ ಭರದಲ್ಲಿ ತಮ್ಮ ಪಕ್ಷದ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಪೇಚಿಗೆ ಸಿಲುಕಿದ್ದಾರೆ.

ಕಂಗನಾ ಅವರು ಲೋಕಸಭೆ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಶುಕ್ರವಾರ ಮಂಡಿಯ ಸುಂದರ್‌ನಗರ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬದಲು ತಮ್ಮದೇ ಪಕ್ಷದ ತೇಜಸ್ವಿ ಸೂರ್ಯ ಅವರು “ಗೂಂಡಾಗಿರಿ” ಮಾಡುತ್ತಾರೆ ಮತ್ತು ಮೀನು ತಿನ್ನುತ್ತಾರೆ ಎಂದು ಟೀಕಿಸಿದ್ದಾರೆ.

ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ "ಹಾಳಾದ ರಾಜಕುಮಾರರಿಂದ" ತುಂಬಿದೆ ಎಂದು ವಾಗ್ದಾಳಿ ನಡೆಸಿದ ಬಾಲಿವುಡ್ ನಟಿ, ಚಂದ್ರನ ಮೇಲೆ ಆಲೂಗಡ್ಡೆ ಬೆಳೆಯಲು ಬಯಸುವ ರಾಹುಲ್ ಗಾಂಧಿ ಇರಬಹುದು ಅಥವಾ ಗೂಂಡಾಗಿರಿ ಮಾಡುವ ಮತ್ತು ಮೀನು ತಿನ್ನುವ ತೇಜಸ್ವಿ ಸೂರ್ಯ ಇರಬಹುದು" ಎಂದು ಹೇಳಿದ್ದಾರೆ.

ಕಂಗನಾ
ಹಿಮಾಚಲ ಪ್ರದೇಶ: ಮಂಡಿಯಲ್ಲಿ ರೋಡ್ ಶೋ ಮೂಲಕ ಕಂಗನಾ ರಣಾವತ್ ಪ್ರಚಾರ ಆರಂಭ!

ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದು, ಅದೇ ಕ್ಷೇತ್ರದ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಆದರೆ ತೇಜಸ್ವಿ ಯಾದವ್ ಅವರು ಇತ್ತೀಚೆಗೆ ನವರಾತ್ರಿ ಹಬ್ಬದ ಸಮಯದಲ್ಲಿ ಮೀನು ತಿನ್ನುತ್ತಿರುವ ಕ್ಲಿಪ್ ಅನ್ನು ಪೋಸ್ಟ್ ಮಾಡಲಾಗಿತ್ತು. ಇದು ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ಪ್ರಮುಖ ಸಂಘರ್ಷದ ವಿಷಯವಾಗಿ ಪರಿಣಮಿಸಿತ್ತು. ಇದನ್ನೇ ಮುಂದಿಟ್ಟುಕೊಂಡು ಕಂಗನಾ ರಣಾವತ್ ಟೀಕಾಪ್ರಹಾರ ನಡೆಸಲು ಮುಂದಾಗಿದ್ದರು.

ಆದರೆ ತೇಜಸ್ವಿ ಯಾದವ್ ಬದಲು, ತಮ್ಮದೇ ಪಕ್ಷದ ಸಂಸದ ತೇಜಸ್ವಿ ಸೂರ್ಯ ಅವರ ಹೆಸರನ್ನು ಪ್ರಸ್ತಾಪಿಸುವ ಮೂಲಕ ಕಂಗನಾ ಮುಜುಗರಕ್ಕೆ ಒಳಗಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com