ಪುಣೆ: ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು 11 ವರ್ಷದ ಬಾಲಕ ಸಾವು!

ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ, ಕ್ರಿಕೆಟ್ ಚೆಂಡು ಮರ್ಮಾಂಗಕ್ಕೆ ಬಡಿದು 11 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮೃತ ಬಾಲಕ ಶೌರ್ಯ
ಮೃತ ಬಾಲಕ ಶೌರ್ಯ

ಪುಣೆ: ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ, ಕ್ರಿಕೆಟ್ ಚೆಂಡು ಮರ್ಮಾಂಗಕ್ಕೆ ಬಡಿದು 11 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬ್ಯಾಟರ್ ಬಾಲನ್ನು ನೇರವಾಗಿ ತನ್ನತ್ತ ಹೊಡೆದಾಗ ಶೌರ್ಯ ಎಂಬ ಬಾಲಕ ಬೌಲಿಂಗ್ ಮಾಡುತ್ತಿದ್ದ. ವೇಗವಾಗಿ ಬಂದ ಚೆಂಡು ಶೌರ್ಯನ ಮರ್ಮಾಂಗಕ್ಕೆ ಬಡಿದಿದ್ದರಿಂದ, ಆತ ಮೈದಾನದಲ್ಲೇ ಕುಸಿದು ಬಿದ್ದಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ನಂತರ ಬಾಲಕನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾದ ದೃಶ್ಯವನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೇಲ್ನೋಟಕ್ಕೆ ಬಾಲಕನ ಆಕಸ್ಮಿಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.11 ವರ್ಷದ ಶೌರ್ಯ ಕ್ರಿಕೆಟ್‌ನಲ್ಲಿ ಕಠಿಣ ಅಭ್ಯಾಸ ಮಾಡಿ ಒಳ್ಳೆ ಕ್ರಿಕೆಟರ್ ಆಗುವ ಕನಸು ಕಂಡಿದ್ದ. ಆದರೆ ಆಕಸ್ಮಿಕವಾಗಿ ಸಂಭವಿಸಿದ ಘಟನೆಯಿಂದ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ.

ಮೃತ ಬಾಲಕ ಶೌರ್ಯ
ಮುಂಬೈ: ಕ್ರಿಕೆಟ್ ಪಂದ್ಯದ ವೇಳೆ ತಲೆಗೆ ಚೆಂಡು ಬಡಿದು ವ್ಯಕ್ತಿ ಸಾವು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com