ಮತದಾನ ಬಳಿಕ ಪ್ರಧಾನಿ ನರೇಂದ್ರ ಮೋದಿ
ಮತದಾನ ಬಳಿಕ ಪ್ರಧಾನಿ ನರೇಂದ್ರ ಮೋದಿ

ಲೋಕಸಭೆ ಚುನಾವಣೆ 2024: ದೇಶದ 93 ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ, ಹಕ್ಕು ಚಲಾಯಿಸಿದ ಮೋದಿ, ಅಮಿತ್ ಶಾ

ಮೂರನೇ ಹಂತದ ಲೋಕಸಭೆ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಜನರನ್ನು ಒತ್ತಾಯಿಸಿದ ಪ್ರಧಾನಿ ಮೋದಿ ಅವರು, ಮತದಾರರ ಸಕ್ರಿಯ ಭಾಗವಹಿಸುವಿಕೆ ಚುನಾವಣೆಯನ್ನು ಇನ್ನಷ್ಟು ರೋಮಾಂಚನಗೊಳಿಸುತ್ತದೆ ಎಂದು ಹೇಳಿದರು.

ನವದೆಹಲಿ: ಲೋಕಸಭೆ ಚುನಾವಣೆ 2024ರ ಮೂರನೇ ಹಂತದ ಮತದಾನ ದೇಶದ 93 ಕ್ಷೇತ್ರಗಳಲ್ಲಿ ಪ್ರಗತಿಯಲ್ಲಿದ್ದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಪ್ರಮುಖರು ತಮ್ಮ ಹಕ್ಕು ಚಲಾಯಿಸಿದರು.

ಗುಜರಾತ್‌ನ 25 ಕ್ಷೇತ್ರಗಳಿಗೆ ಒಂದೇ ಹಂತದ ಮತದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ಲೋಕಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾದ ಬೆನ್ನಲ್ಲೇ ಮೋದಿ ಅವರು ಅಹಮದಾಬಾದ್ ನಗರದ ರಾನಿಪ್ ಪ್ರದೇಶದ ನಿಶಾನ್ ಪಬ್ಲಿಕ್ ಸ್ಕೂಲ್‌ನಲ್ಲಿರುವ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಸ್ಪರ್ಧಿಸುತ್ತಿದ್ದಾರೆ.

ಮೂರನೇ ಹಂತದ ಲೋಕಸಭೆ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಜನರನ್ನು ಒತ್ತಾಯಿಸಿದ ಅವರು, ಮತದಾರರ ಸಕ್ರಿಯ ಭಾಗವಹಿಸುವಿಕೆ ಚುನಾವಣೆಯನ್ನು ಇನ್ನಷ್ಟು ರೋಮಾಂಚನಗೊಳಿಸುತ್ತದೆ ಎಂದು ಹೇಳಿದರು.

ಸಂಸತ್ತಿನ ಮೂರನೇ ಹಂತದ ಮತದಾನದಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಪ್ರಧಾನಿಯವರು ಬೆಂಗಾಲಿ, ಅಸ್ಸಾಮಿ, ಕನ್ನಡ, ಗುಜರಾತಿ, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಮೈಕ್ರೋಬ್ಲಾಗಿಂಗ್ ವೇದಿಕೆಯಲ್ಲಿ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.

ಮೂರನೇ ಹಂತದ ಚುನಾವಣೆಯಲ್ಲಿ ಸುಮಾರು 120 ಮಹಿಳೆಯರು ಸೇರಿದಂತೆ 1,300ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕೇಂದ್ರ ಸಚಿವರಾದ ಅಮಿತ್ ಶಾ (ಗಾಂಧಿನಗರ), ಜ್ಯೋತಿರಾಧಿತ್ಯ ಸಿಂಧಿಯಾ (ಗುಣ), ಮನ್ಸುಖ್ ಮಾಂಡವಿಯಾ (ಪೋರಬಂದರ್), ಪರ್ಷೋತ್ತಮ್ ರೂಪಾಲಾ (ರಾಜ್‌ಕೋಟ್), ಪ್ರಲ್ಹಾದ್ ಜೋಶಿ (ಧಾರವಾಡ) ಮತ್ತು ಎಸ್‌ಪಿ ಸಿಂಗ್ ಬಘೇಲ್ (ಆಗ್ರಾ) ಪ್ರಮುಖರು.

83.9 ಮಿಲಿಯನ್ ಮಹಿಳೆಯರು ಸೇರಿದಂತೆ 172.4 ಮಿಲಿಯನ್ ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ ಮತ್ತು 1.85 ಮಿಲಿಯನ್ ಅಧಿಕಾರಿಗಳು ನಿರ್ವಹಿಸುವ 185,000 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com