ಜೈಲಿನಿಂದ ಸರ್ಕಾರ ನಡೆಸಲು ಕೇಜ್ರಿವಾಲ್‌ಗೆ ಸೌಲಭ್ಯ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ; ದಂಡ ವಿಧಿಸಿದ ಹೈಕೋರ್ಟ್

ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜೈಲಿನಿಂದಲೇ ಸರ್ಕಾರ ನಡೆಸಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಕೋರಿ ವಕೀಲರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದ್ದು, ₹ 1 ಲಕ್ಷ ದಂಡ ವಿಧಿಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ನವದೆಹಲಿ: ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜೈಲಿನಿಂದಲೇ ಸರ್ಕಾರ ನಡೆಸಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಕೋರಿ ವಕೀಲರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದ್ದು, ₹ 1 ಲಕ್ಷ ದಂಡ ವಿಧಿಸಿದೆ.

ಕೇಜ್ರಿವಾಲ್ ರಾಜೀನಾಮೆಗೆ ಯಾವುದೇ 'ಅನಗತ್ಯ ಒತ್ತಡ' ಹೇರದಂತೆ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರನ್ನು ನಿರ್ಬಂಧಿಸುವಂತೆ ಅರ್ಜಿದಾರರು ಕೋರಿದ್ದರು.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ನ್ಯಾಯಮೂರ್ತಿ ಮನ್ಮೀತ್ ಪಿಎಸ್ ಅರೋರಾ ಅವರನ್ನೊಳಗೊಂಡ ಪೀಠವು, ತಮ್ಮ ಬಂಧನದ ವಿರುದ್ಧ ಎಎಪಿ ನಾಯಕ ಈಗಾಗಲೇ ಸುಪ್ರೀಂ ಕೋರ್ಟ್‌ ಮೊರೆ ಹೋಗಿರುವುದರಿಂದ, ನ್ಯಾಯಾಂಗ ಬಂಧನದಲ್ಲಿರುವಾಗ ಅವರಿಗೆ ಯಾವುದೇ ಸೌಲಭ್ಯಗಳನ್ನು ಒದಗಿಸುವ ಕುರಿತು ಯಾವುದೇ ಆದೇಶಗಳನ್ನು ನೀಡಲು ಸಾಧ್ಯವಿಲ್ಲ ಎಂದಿತು.

ಪ್ರಾತಿನಿಧಿಕ ಚಿತ್ರ
ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಗೆ ಮತ್ತೆ ಹಿನ್ನಡೆ; ಮೇ 20 ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!

ನ್ಯಾಯಾಲಯವು ಮಾಧ್ಯಮಗಳ ಮೇಲೆ ಸೆನ್ಸಾರ್‌ಶಿಪ್ ವಿಧಿಸಲು ಅಥವಾ ರಾಜಕೀಯ ಪ್ರತಿಸ್ಪರ್ಧಿಗಳು ಹೇಳಿಕೆಗಳನ್ನು ನೀಡುವುದನ್ನು ತಡೆಯಲು ಸಾಧ್ಯವಿಲ್ಲ. ಪತ್ರಿಕಾ ಅಥವಾ ರಾಜಕೀಯ ವಿರೋಧಿಗಳನ್ನು ಮೌನಗೊಳಿಸಲು ನ್ಯಾಯಾಲಯವು ತುರ್ತು ಪರಿಸ್ಥಿತಿಯನ್ನು ಘೋಷಿಸಬೇಕೇ ಅಥವಾ ಸೆನ್ಸಾರ್‌ಶಿಪ್ ಜಾರಿಗೊಳಿಸಬೇಕೇ ಅಥವಾ ಮಾರ್ಷಲ್ ಕಾನೂನನ್ನು ಹೇರಬೇಕೇ ಎಂದು ಪೀಠ ಪ್ರಶ್ನಿಸಿತು.

'1 ಲಕ್ಷ ರೂ.ಗಳ ಬ್ಯಾಂಕ್ ಡ್ರಾಫ್ಟ್ ಸಿದ್ಧವಾಗಿಡಿ' ಎಂದು ಅರ್ಜಿದಾರರಿಗೆ ನ್ಯಾಯಾಲಯ ಹೇಳಿದೆ.

ಪ್ರಾತಿನಿಧಿಕ ಚಿತ್ರ
ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ NIA ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸು

ಜೈಲಿನಿಂದ ಸರ್ಕಾರವನ್ನು ನಡೆಸುವುದು ಪ್ರಾಯೋಗಿಕವಾಗಿ ಅಸಾಧ್ಯವಾದರೂ, ತಂತ್ರಜ್ಞಾನದ ಬಳಕೆಯಿಂದ ಅದನ್ನು ಸಾಧ್ಯವಾಗಿಸಬಹುದು ಎಂದು ವಾದಿಸಿದ ಅರ್ಜಿದಾರರು, ಜೈಲಿನಲ್ಲಿ ಕೇಜ್ರಿವಾಲ್‌ಗೆ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಬೇಕು. ಕೇಜ್ರಿವಾಲ್ ಅವರ ರಾಜೀನಾಮೆ ಮತ್ತು ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಕುರಿತು ಮಾಧ್ಯಮಗಳು ಸಂವೇದನಾಶೀಲ ಸುದ್ದಿಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸಬೇಕೆಂದು ಪಿಐಎಲ್‌ನಲ್ಲಿ ಮನವಿ ಮಾಡಿದ್ದರು.

ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಅವರು ಅರ್ಜಿಯು ತಪ್ಪು ತಿಳುವಳಿಕೆಯಿಂದ ಕೂಡಿದೆ ಮತ್ತು ದುರುದ್ದೇಶದಿಂದ ಸಲ್ಲಿಸಲಾಗಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com