ಶಿವಕಾಶಿಯಲ್ಲಿ ಭೀಕರ ದುರಂತ: ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 8 ಮಂದಿ ಸುಟ್ಟು ಕರಕಲು

ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಎಂಟು ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಕನಿಷ್ಠ 12 ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಎಂಟು ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಕನಿಷ್ಠ 12 ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಖಾನೆ ಪರವಾನಗಿ ಪಡೆದ ಘಟಕವಾಗಿದೆ. ಸ್ಫೋಟಕ್ಕೆ ಕಾರಣವೇನು ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಮೃತಪಟ್ಟ ಎಂಟು ಮಂದಿ ಪಟಾಕಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಸ್ಫೋಟದ ನಂತರ ಇಡೀ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಿತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ. ಸದ್ಯ ಬೆಂಕಿಗೆ ಕಾರಣ ಸ್ಪಷ್ಟವಾಗಿಲ್ಲ. ಗಂಭೀರವಾಗಿ ಗಾಯಗೊಂಡ ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸಂಗ್ರಹ ಚಿತ್ರ
ಮಂಡ್ಯದಲ್ಲಿ ಪಟಾಕಿ ದುರಂತ: ಓರ್ವ ಕಾರ್ಮಿಕ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ!

ಕಾರ್ಖಾನೆ ಆವರಣವನ್ನು ದಟ್ಟ ಹೊಗೆ ಆವರಿಸಿಕೊಂಡಿದೆ. ಶಿವಕಾಶಿಯನ್ನು ಭಾರತದ ಪಟಾಕಿ ತಯಾರಿಕಾ ಕೇಂದ್ರ ಎಂದು ಕರೆಯಲಾಗುತ್ತದೆ. ಇಲ್ಲಿಂದ ಪಟಾಕಿ, ಸುರಕ್ಷತಾ ಬೆಂಕಿಕಡ್ಡಿ, ಸ್ಟೇಷನರಿ ವಸ್ತುಗಳನ್ನು ತಯಾರಿಸಿ ಇಡೀ ದೇಶಕ್ಕೆ ಕಳುಹಿಸಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com