Delhi excise policy case: ಅರವಿಂದ್ ಕೇಜ್ರಿವಾಲ್ ಜೂನ್ 1 ವರೆಗೆ Supreme Court ಮಧ್ಯಂತರ ಜಾಮೀನು!

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊನೆಗೂ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ್ದು, ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
Arvind Kejriwal
ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊನೆಗೂ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ್ದು, ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊನೆಗೂ ಜಾಮೀನು ದೊರಕಿದ್ದು, ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಕುರಿತು ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶವನ್ನು ನೀಡಿದೆ.

ಜೂನ್ 1 ರವರೆಗೆ ಅವರಿಗೆ ಮಧ್ಯಂತರ ಜಾಮೀನು ನೀಡಿದ್ದು, ಇದರಿಂದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಂತಾಗಿದೆ.

Arvind Kejriwal
ಚುನಾವಣಾ ಪ್ರಚಾರ ಮೂಲಭೂತ, ಸಾಂವಿಧಾನಿಕ ಹಕ್ಕಲ್ಲ: ಕೇಜ್ರಿವಾಲ್ ಮಧ್ಯಂತರ ಜಾಮೀನಿಗೆ ಇಡಿ ವಿರೋಧ

ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಂತರ ಜಾಮೀನಿಂದ ಆಮ್ ಆದ್ಮಿ ಪಕ್ಷ ಹಾಗೂ ದಿಲ್ಲಿ ಸರ್ಕಾರಕ್ಕೆ ದೊಡ್ಡ ನಿರಾಳತೆ ಕೊಟ್ಟಿದೆ. ಆದರೆ ಅರವಿಂದ್ ಕೇಜ್ರಿವಾಲ್ ಅವರು ಆಡಳಿತಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ. ಮುಂದಿನ 20 ದಿನ ಅವರು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಬಹುದಾಗಿದೆ.

ಜೂನ್ 1ರಂದು ಲೋಕಸಭೆ ಚುನಾವಣೆಯ ಕೊನೆಯ ಹಾಗೂ ಏಳನೇ ಹಂತದ ಚುನಾವಣೆ ನಡೆಯಲಿದೆ. ಅಲ್ಲಿಯವರೆಗೂ ಕೇಜ್ರಿವಾಲ್ ಅವರು ಚುನಾವಣೆಗೆ ಸಂಬಂಧಿಸಿದ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಬಹುದು. ಜೂನ್ 2ರಂದು ಅವರು ಜೈಲಿನ ಅಧಿಕಾರಿಗಳ ಮುಂದೆ ಶರಣಾಗಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.

Arvind Kejriwal
ದೆಹಲಿ ಅಬಕಾರಿ ನೀತಿ ಹಗರಣ: ಜೈಲಿನಿಂದ ಬಿಡುಗಡೆಯಾದರೂ Arvind Kejriwal ಕಡತಕ್ಕೆ ಸಹಿ ಹಾಕಲು ಸಾಧ್ಯವಿಲ್ಲ: Supreme Court

ಅಂತೆಯೇ ಮಾರ್ಚ್ 21ರಂದು ಬಂಧನಕ್ಕೆ ಒಳಗಾದ ಬಳಿಕ ಜಾರಿ ನಿರ್ದೇಶನಾಲಯದ ಲಾಕಪ್ ಹಾಗೂ ತಿಹಾರ್ ಜೈಲಿನಲ್ಲಿ ಸುಮಾರು 50 ದಿನಗಳನ್ನು ಕಳೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com