ಹೈದರಾಬಾದ್: ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ ಎಂಬ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಾದ್ ನಗರದಲ್ಲಿ ಮೇ 8 ರಂದು ಚುನಾವಣಾ ಭಾಷಣ ಮಾಡಿದ್ದ ನವನೀತ್ , ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಾ ಆಡಿದ ಮಾತುಗಳು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಎಫ್ ಐಆರ್ ನಲ್ಲಿ ಹೇಳಲಾಗಿದೆ.
ನವನೀತ್ ರಾಣಾ ವಿರುದ್ಧ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ತಂಡ ಮೇ 9 ರಂದು ದೂರು ದಾಖಲಿಸಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್ 188 ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement