BSF hits Pak drone: ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತೀಯ ಸೇನೆ

ಭಾರತೀಯ ಗಡಿಯೊಳಗೆ ಅನುಮಾನಾಸ್ಪದವಾಗಿ ಹಾರಾಡುತ್ತಿದ್ದ ಪಾಕಿಸ್ತಾನದಿಂದ ಬಂದ ಡ್ರೋನ್ ಅನ್ನು ಭಾರತೀಯ ಸೇನೆ ಶುಕ್ರವಾರ ತಡರಾತ್ರಿ ಹೊಡೆದುರುಳಿಸಿದೆ.
ಪಾಕ್ ಡ್ರೋನ್ ಹೊಡೆದುರುಳಿಸಿದ ಸೇನೆ
ಪಾಕ್ ಡ್ರೋನ್ ಹೊಡೆದುರುಳಿಸಿದ ಸೇನೆ

ಶ್ರೀನಗರ: ಭಾರತೀಯ ಗಡಿಯೊಳಗೆ ಅನುಮಾನಾಸ್ಪದವಾಗಿ ಹಾರಾಡುತ್ತಿದ್ದ ಪಾಕಿಸ್ತಾನದಿಂದ ಬಂದ ಡ್ರೋನ್ ಅನ್ನು ಭಾರತೀಯ ಸೇನೆ ಶುಕ್ರವಾರ ತಡರಾತ್ರಿ ಹೊಡೆದುರುಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕ್ ಡ್ರೋನ್ ಹೊಡೆದುರುಳಿಸಿದ ಸೇನೆ
ತಾಕತ್ತಿದ್ದರೆ POK ವಾಪಸ್ ಪಡೆಯಲಿ, ಪಾಕಿಸ್ತಾನ ಕೈಗೆ ಬಳೆ ತೊಟ್ಟಿಲ್ಲ.. ಅವರ ಬಳಿಯೂ ಅಣು ಬಾಂಬ್ ಇದೆ: ರಾಜನಾಥ್ ಸಿಂಗ್ ಗೆ Farooq Abdullah ಸವಾಲು!

ಶುಕ್ರವಾರ ತಡರಾತ್ರಿ ಪಾಕ್‌ ಗಡಿಯಲ್ಲಿ ಡ್ರೋನ್‌ ಹಾರಾಟ ನಡೆಸುತ್ತಿರುವುದನ್ನು ಪತ್ತೆ ಹಚ್ಚಿದ್ದ ಬಿಎಸ್‌ಎಫ್ ಪಡೆಗಳು ಕೂಡಲೇ ಹಲವು ಸುತ್ತು ಗುಂಡು ಹಾರಿಸುವ ಮೂಲಕ ಡ್ರೋನ್‌ ಅನ್ನು ಹೊಡೆದುರುಳಿಸಿದ್ದಾರೆ. ಡ್ರೋನ್ ಮೂಲಕ ಶಸ್ತ್ರಾಸ್ತ್ರಗಳು ಅಥವಾ ಮಾದಕ ವಸ್ತುಗಳನ್ನು ಸಾಗಾಟ ನಡೆಸಿರುವ ಬಗ್ಗೆ ರಾಮ್‌ಘರ್ ಸೆಕ್ಟರ್‌ನ ನಾರಾಯಣಪುರದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚೆಗಷ್ಟೇ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್–ಎ–ತಯಬಾ ಉಗ್ರ ಸಂಘಟನೆಯ ಘಟಕವಾದ ‘ಟಿಆರ್‌ಎಫ್‌’ನ ಕಮಾಂಡರ್‌ ಸೇರಿದಂತೆ ಇಬ್ಬರು ಉಗ್ರರು ಹತರಾಗಿದ್ದರು. ಇದರ ಬೆನ್ನಲ್ಲೇ ಗಡಿಯಲ್ಲಿ ಶಂಕಿತ ಚಟುಟಿಕೆಗಳು ವ್ಯಾಪಕವಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com