
ಕನ್ನೌಜ್: ಕಾಂಗ್ರೆಸ್ ಪಕ್ಷವೂ ತಪ್ಪುಗಳನ್ನು ಮಾಡಿದೆ, ಪಕ್ಷದ ರಾಜಕಾರಣದಲ್ಲಿ ಮುಂದಿನ ದಿನಗಳಲ್ಲಿ ಬದಲಾವಣೆಯ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಮೋದಿ ಪ್ರಧಾನಿಯ ರೀತಿ ವರ್ತಿಸುತ್ತಿಲ್ಲ, ದೊರೆಯಂತೆ ವರ್ತಿಸುತ್ತಿದ್ದಾರೆ, ಅವರದ್ದು ಮೂವರು ಹಣಕಾಸುದಾರರಿರುವ ತಂಡವಾಗಿದೆ ಎಂದು ರಾಹುಲ್ ಆರೋಪಿಸಿದ್ದಾರೆ.
ಕನ್ನೌಜ್ ನಲ್ಲಿ ಸಂವಿಧಾನಕ್ಕೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಮಾತನಾಡಿರುವ ರಾಹುಲ್ ಗಾಂಧಿ, ತಾವು ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಲು ತಯಾರಿರುವುದಾಗಿಯೂ, ಆದರೆ ಪ್ರಧಾನಿ ಇದಕ್ಕೆ ಒಪ್ಪುವುದಿಲ್ಲ ಎಂದೂ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ತನ್ನ ರಾಜಕಾರಣವನ್ನು ಬದಲಾವಣೆ ಮಾಡಿಕೊಳ್ಳಲಿದೆ. ಇದನ್ನು ಮಾಡಬೇಕಾಗಿದೆ. ಕಾಂಗ್ರೆಸ್ ಪಕ್ಷವೂ ತಪ್ಪು ಮಾಡಿದೆ ಎಂದು ನಾನು ಹೇಳಬಯಸುತ್ತೇನೆ ಮತ್ತು ನಾನು ಕಾಂಗ್ರೆಸ್ ಪಕ್ಷದವನಾಗಿದ್ದುಕೊಂಡು ಇದನ್ನು ಹೇಳುತ್ತಿದ್ದೇನೆ ಎಂದು ಅವರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
ಆದರೆ ಕಾಂಗ್ರೆಸ್ ಪಕ್ಷಕ್ಕೆ ಯಾವ ರೀತಿಯ ಬದಲಾವಣೆ ಅಗತ್ಯವಿದೆ ಎಂಬುದನ್ನು ಅವರು ವಿವರಿಸಿಲ್ಲ. ಸಮೃದ್ಧ ಭಾರತ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾದ ‘ಸಂವಿಧಾನ ಸಮ್ಮೇಳನ’ದಲ್ಲಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.
Advertisement