'ನನ್ನ ಕುಟುಂಬ ರಾಯ್ ಬರೇಲಿಗಾಗಿ ಕೆಲಸ ಮಾಡಿದರೆ, ಪ್ರಧಾನಿ ಮೋದಿ ಅದಾನಿ, ಅಂಬಾನಿಗಾಗಿ ಕೆಲಸ- ರಾಹುಲ್

ಅದಾನಿ ಮತ್ತು ಅಂಬಾನಿ ಹಿತಾಸಕ್ತಿಯಲ್ಲಿ ಕೆಲಸ ಮಾಡುವ ಪ್ರಧಾನಿ ನರೇಂದ್ರ ಮೋದಿಯವರಂತೆ ತಮ್ಮ ಕುಟುಂಬ ಯಾವಾಗಲೂ ರಾಯ್ ಬರೇಲಿ ಲೋಕಸಭಾ ಕ್ಷೇತ್ರದ ಜನರಿಗಾಗಿ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ರಾಯ್ ಬರೇಲಿ: ಅದಾನಿ ಮತ್ತು ಅಂಬಾನಿ ಹಿತಾಸಕ್ತಿಯಲ್ಲಿ ಕೆಲಸ ಮಾಡುವ ಪ್ರಧಾನಿ ನರೇಂದ್ರ ಮೋದಿಯವರಂತೆ ತಮ್ಮ ಕುಟುಂಬ ಯಾವಾಗಲೂ ರಾಯ್ ಬರೇಲಿ ಲೋಕಸಭಾ ಕ್ಷೇತ್ರದ ಜನರಿಗಾಗಿ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ನಾಮಪತ್ರ ಸಲ್ಲಿಸಿದ ನಂತರ ಕ್ಷೇತ್ರದಲ್ಲಿ ಮೊದಲ ಬಾರಿಗೆ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಕುಟುಂಬವು ಇಲ್ಲಿನ ಜನರೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿರುವ ಕಾರಣ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವುದಾಗಿ ಮಹಾರಾಜ್‌ಗಂಜ್‌ನಲ್ಲಿ ಹೇಳಿದರು.

ರಾಹುಲ್ ಗಾಂಧಿ
ಪ್ರಧಾನಿ ಮೋದಿ ಟೆಂಪೋ ಬಿಲಿಯನೇರ್‌ಗಳ ಕೈಗೊಂಬೆ: ರಾಹುಲ್ ಗಾಂಧಿ

ಗುರುಬಕ್ಸ್‌ಗಂಜ್, ಲಾಲ್‌ಗಂಜ್ ಮತ್ತು ಕಿಶುಂದಾಸ್‌ಪುರದಲ್ಲಿ ಚುನಾವಣಾ ರ್‍ಯಾಲಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, 2022- 25 ರಲ್ಲಿ ಉನ್ನತ ಕೈಗಾರಿಕೋದ್ಯಮಿಗಳ 24 ವರ್ಷಗಳ ಹಣಕ್ಕೆ ಸಮಾನವಾದ 16 ಲಕ್ಷ ಕೋಟಿ ರೂಪಾಯಿಗಳ ಸಾಲವನ್ನು ಮನ್ನಾ ಮಾಡಲಾಗಿದೆ ಎಂದು ಆರೋಪಿಸಿದರು.

ರಾಯ್ ಬರೇಲಿಯಲ್ಲಿ ತಮ್ಮ ಅಜ್ಜಿ ಇಂದಿರಾ ಗಾಂಧಿ, ಅವರ ತಂದೆ ರಾಜೀವ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಜನರ ಜೀವನವನ್ನು ಸುಧಾರಿಸಲು ಶ್ರಮಿಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು. ಗಾಂಧಿ ಕುಟುಂಬದ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿರುವ ರಾಯ್ ಬರೇಲಿ ಕ್ಷೇತ್ರವನ್ನು 2004 ರಿಂದ ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದರು. ಈ ಕ್ಷೇತ್ರವನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕೂಡ ಪ್ರತಿನಿಧಿಸಿದ್ದರು.

ರೈತರು ಮತ್ತು ನಿರುದ್ಯೋಗಿ ಯುವಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಮಾಧ್ಯಮಗಳು ತೋರಿಸುತ್ತಿಲ್ಲ ಬದಲಿಗೆ ಉನ್ನತ ಕೈಗಾರಿಕೋದ್ಯಮಿಗಳ ಕುಟುಂಬಗಳಲ್ಲಿ ಮದುವೆ ಕಾರ್ಯಕ್ರಮಗಳಿಗೆ ಪ್ರಾಮುಖ್ಯತೆ ನೀಡುತ್ತಿವೆ ಎಂದು ಆರೋಪಿಸಿದ ರಾಹುಲ್ ಗಾಂಧಿ, ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಬಡ ಕುಟುಂಬಗಳ ಪಟ್ಟಿಯನ್ನು ಸಂಗ್ರಹಿಸಿ ವಾರ್ಷಿಕವಾಗಿ 1 ಲಕ್ಷ ರೂ ಅಥವಾ ತಿಂಗಳಿಗೆ ರೂ. 8,500ಗಳನ್ನು ಪ್ರತಿ ಕುಟುಂಬದ ಓರ್ವ ಮಹಿಳಾ ಖಾತೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದರು.

ರಾಯ್ ಬರೇಲಿಯಲ್ಲಿ ಮೇ 20ರಂದು ಐದನೇ ಹಂತದ ಲೋಕಸಭೆ ಚುನಾವಣೆ ನಡೆಯಲಿದೆ. ಇಲ್ಲಿ ಉತ್ತರ ಪ್ರದೇಶದ ಸಚಿವ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ರಾಹುಲ್ ಎದುರಾಳಿಯಾಗಿ ಬಿಜೆಪಿ ಕಣಕ್ಕಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com