ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥ ಧಾಮದ ಉದ್ಘಾಟನೆಗೂ ಮುನ್ನ ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಿ, ಸೂರ್ಯದೇವನಿಗೆ ಅರ್ಘ್ಯ ನೀಡಿದರು.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥ ಧಾಮದ ಉದ್ಘಾಟನೆಗೂ ಮುನ್ನ ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಿ, ಸೂರ್ಯದೇವನಿಗೆ ಅರ್ಘ್ಯ ನೀಡಿದರು.

ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ಪ್ರಧಾನಿ ಮೋದಿಯಿಂದ ಗಂಗಾಸ್ನಾನ

ಪ್ರಧಾನಿ ನರೇಂದ್ರ ಮೋದಿ ಅವರು ತಾವು ಪ್ರತಿನಿಧಿಸುತ್ತಿರುವ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಒಂದು ದಿನ ಮೊದಲು ಸೋಮವಾರ ಸಂಜೆ ಆರು ಕಿಲೋಮೀಟರ್ ರೋಡ್ ಶೋ ನಡೆಸಲಿದ್ದಾರೆ.

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ತಾವು ಪ್ರತಿನಿಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಒಂದು ದಿನ ಮೊದಲು ಸೋಮವಾರ ಸಂಜೆ ಆರು ಕಿಲೋಮೀಟರ್ ರೋಡ್ ಶೋ ನಡೆಸಲಿದ್ದಾರೆ.

ಇಂದು ಸಂಜೆ ವಾರಣಾಸಿಯಲ್ಲಿ ರೋಡ್ ಶೋ ನಡೆಸುವ ಪ್ರಧಾನಿ ಮೋದಿ, ನಾಳೆ ಬೆಳಗ್ಗೆ ನಾಮಪತ್ರ ಸಲ್ಲಿಸುವ ಮುನ್ನ ಗಂಗಾನದಿಯಲ್ಲಿ ಸ್ನಾನ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಏಳನೇ ಮತ್ತು ಕೊನೆಯ ಹಂತದಲ್ಲಿ ಜೂನ್ 1 ರಂದು ವಾರಣಾಸಿಯಲ್ಲಿ ಮತದಾನ ನಡೆಯಲಿದ್ದು, ಪ್ರಧಾನಿ ಮೋದಿ ಸತತ ಮೂರನೇ ಅವಧಿಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥ ಧಾಮದ ಉದ್ಘಾಟನೆಗೂ ಮುನ್ನ ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಿ, ಸೂರ್ಯದೇವನಿಗೆ ಅರ್ಘ್ಯ ನೀಡಿದರು.
Video: ಟರ್ಬನ್ ಧರಿಸಿ, ಚಪಾತಿ ಮಾಡಿ ಗುರುದ್ವಾರದಲ್ಲಿ ಭಕ್ತರಿಗೆ ಊಟ ಬಡಿಸಿದ ಪ್ರಧಾನಿ ಮೋದಿ!

5,000ಕ್ಕೂ ಹೆಚ್ಚು ಮಹಿಳೆಯರು ಪ್ರಧಾನಿ ಮೋದಿ ರೋಡ್‌ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಚಿವರು ಮತ್ತು ಶಾಸಕರು ಭಾಗವಹಿಸಲಿದ್ದಾರೆ.

ಮರಾಠಿ, ಗುಜರಾತಿ, ಬೆಂಗಾಲಿ, ಮಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸೇರಿದಂತೆ ವಿವಿಧ ಸಮುದಾಯಗಳ ಜನರು ರೋಡ್‌ಶೋನ 11 ವಲಯಗಳಲ್ಲಿ 100 ಪಾಯಿಂಟ್‌ಗಳಲ್ಲಿ ಮೋದಿಯನ್ನು ಸ್ವಾಗತಿಸಲಿದ್ದಾರೆ ಎಂದು ಬಿಜೆಪಿ ಪದಾಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ BLW ಗೆಸ್ಟ್‌ಹೌಸ್‌ನಲ್ಲಿ ಪ್ರಧಾನಿ ಮೋದಿ ತಂಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

X
Kannada Prabha
www.kannadaprabha.com