
ಮುಂಬೈ: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿವಿಧ ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ 13.56 ಕೋಟಿ ರೂ. ಮೌಲ್ಯದ 22.14 ಕೆಜಿ ಚಿನ್ನವನ್ನು ಕಸ್ಟಮ್ಸ್ ಇಲಾಖೆ ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಶುಕ್ರವಾರ ಮತ್ತು ಭಾನುವಾರದ ನಡುವೆ ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 20 ಚಿನ್ನ ಕಳ್ಳಸಾಗಣೆ ಪ್ರಕರಣಗಳಲ್ಲಿ 11 ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಯಾಣಿಕರು ತಮ್ಮ ಗುದನಾಳ, ಒಳ ಉಡುಪು, ದೇಹದ ಮೇಲೆ ಮತ್ತು ರಟ್ಟಿನ ಹಾಳೆಯಲ್ಲಿ ಬಚ್ಚಿಟ್ಟಿದ್ದ ಚಿನ್ನದ ಲೋಹ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಂದು ಪ್ರಕರಣದಲ್ಲಿ, ಪ್ರಯಾಣಿಕರೊಬ್ಬರು ಧರಿಸಿದ್ದ ಬುರ್ಖಾದ ಅಡಿಯಲ್ಲಿ ಚಿನ್ನಾಭರಣಗಳನ್ನು ಬಚ್ಚಿಡಲಾಗಿತ್ತು ಮತ್ತು ಇನ್ನೊಂದು ಪ್ರಕರಣದಲ್ಲಿ, ಬೆಲೆಬಾಳುವ ಚಿನ್ನದ ಬಾರ್‌ಗಳನ್ನು ಒಳ ಉಡುಪುಗಳಲ್ಲಿ ಬಚ್ಚಿಡಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಯಾಣಿಕರು ತಮ್ಮ ಬೆಲ್ಟ್ ನ ಬಕಲ್ ರೂಪದಲ್ಲಿ ಮತ್ತು ಬಳೆ ರೂಪದಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು. ಅಲ್ಲದೆ ಮೇಣದ ರೂಪದಲ್ಲಿ ಚಿನ್ನದ ಧೂಳನ್ನು ಪ್ರಯಾಣಿಕರು ತಮ್ಮ ಗುದನಾಳದಲ್ಲಿಟ್ಟುಕೊಂಡಿದ್ದರು ಎಂದು ಅವರು ಹೇಳಿದ್ದಾರೆ.
Advertisement