ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಮೇ 30ರವರೆಗೆ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಮೇ 30ರವರೆಗೆ ವಿಸ್ತರಿಸಿದೆ.
ಮನೀಶ್ ಸಿಸೋಡಿಯಾ
ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಮೇ 30ರವರೆಗೆ ವಿಸ್ತರಿಸಿದೆ.

ದೆಹಲಿ ಸರ್ಕಾರವು 2021ರ ನವೆಂಬರ್ 17 ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತು. ಆದರೆ, ಭ್ರಷ್ಟಾಚಾರದ ಆರೋಪಗಳ ನಡುವೆ ಸೆಪ್ಟೆಂಬರ್ 2022 ರ ಕೊನೆಯಲ್ಲಿ ಅದನ್ನು ರದ್ದುಗೊಳಿಸಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಯನ್ನು ಪ್ರಾರಂಭವಾಯಿತು. ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಪ್ರಧಾನ ಆರೋಪಿಗಳಲ್ಲಿ ಒಬ್ಬರೆಂದು ಪಟ್ಟಿ ಮಾಡಲಾಗಿದೆ.

ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಸಿಸೋಡಿಯಾ ಅವರ ಹಿಂದಿನ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅವರ ಕಸ್ಟಡಿಯನ್ನು ವಿಸ್ತರಿಸಿ ಆದೇಶಿಸಿದ್ದಾರೆ.

ಇದಲ್ಲದೆ, ಆರೋಪಿಗಳಲ್ಲಿ ಒಬ್ಬರಾದ ಅರುಣ್ ಪಿಳ್ಳೈ ಸಲ್ಲಿಸಿದ ಮೇಲ್ಮನವಿಯ ಆಧಾರದ ಮೇಲೆ ದೆಹಲಿ ಹೈಕೋರ್ಟ್ ನೀಡಿದ ನಿರ್ದೇಶನಗಳಿಗೆ ಅನುಗುಣವಾಗಿ ಸಿಸೋಡಿಯಾ ವಿರುದ್ಧದ ಆರೋಪಗಳನ್ನು ರೂಪಿಸುವ ವಿಚಾರಣೆಯನ್ನು ನ್ಯಾಯಾಲಯವು ಮುಂದೂಡಿದೆ.

ಮನೀಶ್ ಸಿಸೋಡಿಯಾ
ಶೀಘ್ರದಲ್ಲೇ ನಿಮ್ಮನ್ನು ಹೊರಗಡೆ ಭೇಟಿಯಾಗುತ್ತೇನೆ: ತಿಹಾರ್ ಜೈಲಿನಿಂದ ಎಎಪಿ ನಾಯಕ ಮನೀಶ್ ಸಿಸೋಡಿಯಾ ಪತ್ರ

ಕಳೆದ ವರ್ಷ, ಮಾರ್ಚ್ 9 ರಂದು ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ದೆಹಲಿಯ ಮಾಜಿ ಉಪ ಮುಖ್ಯಮಂತ್ರಿಯನ್ನು ಬಂಧಿಸಿತ್ತು. ಜಾಮೀನು ಅರ್ಜಿ ವಿಚಾರಣೆಯ ಸಂದರ್ಭದಲ್ಲಿ, ಸಿಸೋಡಿಯಾ ಅವರ ಪರ ವಕೀಲರು ಅವರ ಬಿಡುಗಡೆಗಾಗಿ ವಾದಿಸಿದರು.

ಇದಲ್ಲದೆ, ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಆರೋಪಿಯನ್ನಾಗಿ ಸೇರಿಸಲಾಗುವುದು ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ದೆಹಲಿ ಹೈಕೋರ್ಟ್‌ನಲ್ಲಿ ಪ್ರತಿಪಾದಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com