ನ್ಯೂಸ್ ಕ್ಲಿಕ್ ಸ್ಥಾಪಕ ಪ್ರಭಿರ್ ಪುರ್ಕಾಯಸ್ಥ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಕ್ಲಿಕ್ ಸ್ಥಾಪಕ ಪ್ರಭಿರ್ ಪುರ್ಕಾಯಸ್ಥ ಅವರನ್ನು ಭಯೋತ್ಪಾದನಾ ನಿಗ್ರಹ ಕಾನೂನಿನ ಅಡಿಯಲ್ಲಿ ಬಂಧನಕ್ಕೊಳಪಡಿಸಿರುವುದನ್ನು ಅಸಿಂಧುಗೊಳಿಸಿರುವ ಸುಪ್ರೀಂ ಕೋರ್ಟ್ ಅವರನ್ನು ಬಂಧಮುಕ್ತಗೊಳಿಸುವಂತೆ ಹೇಳಿದೆ.
Prabir Purkayastha, the founder and editor-in-chief of NewsClick.
ನ್ಯೂಸ್ ಕ್ಲಿಕ್ ಸ್ಥಾಪಕ ಪ್ರಭಿರ್ ಪುರ್ಕಾಯಸ್ಥonline desk
Updated on

ನವದೆಹಲಿ: ನ್ಯೂಸ್ ಕ್ಲಿಕ್ ಸ್ಥಾಪಕ ಪ್ರಭಿರ್ ಪುರ್ಕಾಯಸ್ಥ ಅವರನ್ನು ಭಯೋತ್ಪಾದನಾ ನಿಗ್ರಹ ಕಾನೂನಿನ ಅಡಿಯಲ್ಲಿ ಬಂಧನಕ್ಕೊಳಪಡಿಸಿರುವುದನ್ನು ಅಸಿಂಧುಗೊಳಿಸಿರುವ ಸುಪ್ರೀಂ ಕೋರ್ಟ್ ಅವರನ್ನು ಬಂಧಮುಕ್ತಗೊಳಿಸುವಂತೆ ಹೇಳಿದೆ.

ನ್ಯಾ.ಬಿಆರ್ ಗವಾಯಿ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ಪೀಠ ಈ ಆದೇಶ ನೀಡಿದೆ.

ಪ್ರಭಿರ್ ಪುರ್ಕಾಯಸ್ಥ ವಿರುದ್ಧ ಸಲ್ಲಿಸಿದ್ದ ಎಫ್ಐಆರ್ ನಲ್ಲಿ ನ್ಯೂಸ್ ಕ್ಲಿಕ್ ನ್ಯೂಸ್ ಪೋರ್ಟಲ್ ಸಂಸ್ಥೆ ಭಾರತದ ಸಾರ್ವಭೌಮತೆಗೆ ಧಕ್ಕೆ ಉಂಟುಮಾಡುವುದಕ್ಕಾಗಿ ಮತ್ತು ದೇಶದ ವಿರುದ್ಧ ಅಸಮಾಧಾನವನ್ನು ಉಂಟುಮಾಡುವುದಕ್ಕಾಗಿ ಚೀನಾದಿಂದ ಹಣಕಾಸು ನೆರವು ಪಡೆಯುತ್ತಿತ್ತು ಎಂದು ಆರೋಪಿಸಲಾಗಿತ್ತು.

2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಹಾಳುಮಾಡಲು ಪುರ್ಕಾಯಸ್ಥ ಅವರು ಪೀಪಲ್ಸ್ ಅಲೈಯನ್ಸ್ ಫಾರ್ ಡೆಮಾಕ್ರಸಿ ಅಂಡ್ ಸೆಕ್ಯುಲರಿಸಂ (PADS) ಗುಂಪಿನೊಂದಿಗೆ ಪಿತೂರಿ ನಡೆಸಿದ್ದಾರೆ ಎಂದು FIR ನಲ್ಲಿ ಆರೋಪಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com