
ಚಿನ್ಸುರಾ: ವಿರೋಧ ಪಕ್ಷಗಳ ಮೈತ್ರಿಕೂಟ INDIA ಬಣ ಕೇಂದ್ರದಲ್ಲಿ ಸರ್ಕಾರ ರಚನೆಗೆ ಬಾಹ್ಯ ಬೆಂಬಲ ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.
ಹೂಗ್ಲಿ ಜಿಲ್ಲೆಯ ಚಿನ್ಸುರಾದಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ, ಲೋಕಸಭೆಯಲ್ಲಿ 400 ಸ್ಥಾನ ಗೆಲ್ಲುವ ಬಿಜೆಪಿಯ ಮಹತ್ವಾಕಾಂಕ್ಷೆಯ ಗುರಿಯ ಬಗ್ಗೆ ಬ್ಯಾನರ್ಜಿ ಸಂದೇಹ ವ್ಯಕ್ತಪಡಿಸಿದರು.
"ಬಿಜೆಪಿ 400 ಸ್ಥಾನ ಗೆಲ್ಲುತ್ತದೆ ಎಂದು ಹೇಳುತ್ತಿದೆ. ಆದರೆ ಈ ಬಾರಿ ಅದು ಆಗುವುದಿಲ್ಲ ಎಂದು ಜನರು ಹೇಳುತ್ತಿದ್ದಾರೆ. INDIA ಬಣ ಕೇಂದ್ರದಲ್ಲಿ ಸರ್ಕಾರ ರಚಿಸಲು ಹೊರಗಿನಿಂದ ಟಿಎಂಸಿ ಬೆಂಬಲ ನೀಡಲಿದೆ ಎಂದರು.
ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನದ ವಿರುದ್ಧ ಬ್ಯಾನರ್ಜಿ ತಮ್ಮ ಪಕ್ಷದ ಅಚಲ ನಿಲುವನ್ನು ಘೋಷಿಸಿದರು.
ಚುನಾವಣಾ ಆಯೋಗ ಕೈಗೊಂಬೆಯಾಗಿದ್ದು, ಮೋದಿಯವರ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತದೆ. ಎರಡೂವರೆ ತಿಂಗಳಿನಿಂದ ಚುನಾವಣೆ ನಡೆಯುತ್ತಿದೆ. ಅಧಿಕಾರಿಗಳು ಸಾಮಾನ್ಯ ಜನರ ಹೋರಾಟವನ್ನು ಎಂದಾದರೂ ಅರಿತುಕೊಂಡಿದ್ದೀರಾ ಎಂದು ಬ್ಯಾನರ್ಜಿ ಪ್ರಶ್ನಿಸಿದರು.
Advertisement