ಅನಿತಾ ಮತ್ತು ನರೇಶ್ ಗೋಯಲ್
ಅನಿತಾ ಮತ್ತು ನರೇಶ್ ಗೋಯಲ್

ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಕ್ಯಾನ್ಸರ್‌ ನಿಂದ ನಿಧನ

ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಅವರ ಪತ್ನಿ ಅನಿತಾ ಗೋಯಲ್‌ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಹಲವು ಸಮಯಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಮುಂಬೈಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
Published on

ಮುಂಬೈ: ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಅವರ ಪತ್ನಿ ಅನಿತಾ ಗೋಯಲ್‌ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಹಲವು ಸಮಯಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಮುಂಬೈಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ನಿಧನ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ನರೇಶ್‌ ಗೋಯಲ್‌ ಅವರಿಗೆ ಇತ್ತೀಚೆಗೆ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಅನಿತಾ ಅವರ ಅಂತ್ಯಕ್ರಿಯೆ ಇಂದು ಮುಂಬೈಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿದ್ದ ನರೇಶ್ ಗೋಯಲ್ ಅವರಿಗೆ ಬಾಂಬೆ ಹೈಕೋರ್ಟ್ ಇತ್ತೀಚೆಗೆ ಜಾಮೀನು ನೀಡಿತ್ತು. ಗೋಯಲ್ ಅವರು ತಮ್ಮ ಪತ್ನಿಯ ಗಂಭೀರ ಆರೋಗ್ಯ ಸ್ಥಿತಿ ಹಾಗೂ ತಮ್ಮ ಚಿಕಿತ್ಸೆಗಾಗಿ ಮಾನವೀಯ ಆಧಾರದ ಮೇಲೆ ಜಾಮೀನು ಕೋರಿದ್ದರು. ಅನಿತಾ ಅವರ ಪತಿ ಮತ್ತು ಇಬ್ಬರು ಮಕ್ಕಳಾದ ನಮ್ರತಾ ಮತ್ತು ನಿವಾನ್ ಅವರನ್ನು ಅಗಲಿದ್ದಾರೆ. ಗುರುವಾರ ಮುಂಬೈನಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.‌

ಅನಿತಾ ಮತ್ತು ನರೇಶ್ ಗೋಯಲ್
ಪಿಎಂಎಲ್‌ಎ ಪ್ರಕರಣ: ನರೇಶ್ ಗೋಯಲ್ ಕುಟುಂಬಕ್ಕೆ ಸೇರಿದ 538 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ನರೇಶ್‌ ಗೋಯಲ್‌ ಅವರು ಕೆನರಾ ಬ್ಯಾಂಕ್‌ನಿಂದ ಸಾಲ ಪಡೆದು, ಕೋಟ್ಯಂತರ ರೂ. ವಂಚಿಸಿದ ಪ್ರಕರಣ ಎದುರಿಸುತ್ತಿದ್ದು, ಇವರ ವಿರುದ್ಧ ಇ.ಡಿ ಅಧಿಕಾರಿಗಳು ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಳೆದ ಸೆಪ್ಟೆಂಬರ್‌ನಲ್ಲಿ ನರೇಶ್‌ ಗೋಯಲ್‌ ಅವರನ್ನು ಬಂಧಿಸಲಾಗಿತ್ತು.

X

Advertisement

X
Kannada Prabha
www.kannadaprabha.com