ದೆಹಲಿ ಸಿಎಂ ಕೇಜ್ರಿವಾಲ್ ಹಾಗೂ ಎಎಪಿ ವಿರುದ್ಧ ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಕೆ: 'ಸುಪ್ರೀಂ'ಗೆ ಇಡಿ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ(ಎಎಪಿ) ವಿರುದ್ಧ ಶೀಘ್ರದಲ್ಲೇ ಚಾರ್ಜ್ ಶೀಟ್.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್TNIE

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ(ಎಎಪಿ) ವಿರುದ್ಧ ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸುವುದಾಗಿ ಜಾರಿ ನಿರ್ದೇಶನಾಲಯ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಇಡಿ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠಕ್ಕೆ, “ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ನಾವು ಪ್ರಸ್ತಾಪಿಸುತ್ತಿದ್ದೇವೆ. ನಾವು ಅದನ್ನು ಶೀಘ್ರದಲ್ಲೇ ಸಲ್ಲಿಸುತ್ತೇವೆ" ಎಂದು ತಿಳಿಸಿದರು.

ತಮ್ಮ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಇಡಿ ಈ ಹೇಳಿಕೆ ನೀಡಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು: ವಿನಾಯಿತಿ ನೀಡಿಲ್ಲ; ತೀರ್ಪಿನ ವಿಮರ್ಶೆಗಳಿಗೆ ಸ್ವಾಗತ- ಸುಪ್ರೀಂ ಕೋರ್ಟ್

ರದ್ದಾಗಿರುವ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯನ್ನು ಮಾರ್ಚ್ 21 ರಂದು ಬಂಧಿಸಲಾಗಿತ್ತು. ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮೇ 10 ರಂದು ಸುಪ್ರೀಂ ಕೋರ್ಟ್, ಕೇಜ್ರಿವಾಲ್‌ ಅವರಿಗೆ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದ್ದು, ಜೂನ್ 2 ರಂದು ಶರಣಾಗಬೇಕಿದೆ.

2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯ ರಚನೆ ಮತ್ತು ಕಾರ್ಯಗತಗೊಳಿಸುವಿಕೆಯಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ಹಲವು ಎಎಪಿ ನಾಯಕರ ವಿರುದ್ಧ ಕೇಸ್ ದಾಖಲಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com