
ನವದೆಹಲಿ: ವಿಶೇಷ ನ್ಯಾಯಾಲಯವು ಅಕ್ರಮ ಹಣ ವರ್ಗಾವಣೆಯ ದೂರನ್ನು ಪರಿಗಣಿಸಿದ ನಂತರ ಜಾರಿ ನಿರ್ದೇಶನಾಲಯ (ED) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಸೆಕ್ಷನ್ 19 ರ ಅಡಿಯಲ್ಲಿ ಆರೋಪಿಯನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಾಧೀಶರಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠವು ಆರೋಪಿಯು ನ್ಯಾಯಾಲಯದ ಮುಂದೆ ಹಾಜರಾದಾಗ, ಅವನ ಕಸ್ಟಡಿಯನ್ನು ಪಡೆಯಲು ಸಂಸ್ಥೆಯು ಸಂಬಂಧಪಟ್ಟ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಹೇಳಿದೆ.
ಆರೋಪಿಯು ವಿಶೇಷ ನ್ಯಾಯಾಲಯಕ್ಕೆ ಸಮನ್ಸ್ ಮೂಲಕ ಹಾಜರಾದರೆ ಅವರು ಕಸ್ಟಡಿಯಲ್ಲಿದ್ದಾರೆ ಎಂದು ಪರಿಗಣಿಸುವುದಿಲ್ಲ. ಸಮನ್ಸ್ ಗೆ ಅನುಗುಣವಾಗಿ ನ್ಯಾಯಾಲಯದ ಮುಂದೆ ಹಾಜರಾದ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ತೀರ್ಪು ನೀಡಿದೆ.
ಪಿಎಂಎಲ್‌ಎ ಸೆಕ್ಷನ್ 45 ರ ಷರತ್ತುಗಳು ಆರೋಪಿಗಳಿಗೆ ಅನ್ವಯಿಸುವುದಿಲ್ಲ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯು ಜಾಮೀನಿಗೆ ಅರ್ಜಿ ಸಲ್ಲಿಸಿದಾಗ ನ್ಯಾಯಾಲವು ಮೊದಲು ಪಬ್ಲಿಕ್ ಪ್ರಾಜಿಕ್ಯೂಟರ್‌ನ ವಿಚಾರಣೆಗೆ ಅವಕಾಶ ನೀಡಬೇಕೆಂದು ಸೂಚನೆ ನೀಡಿದೆ.
ಆರೋಪಿಯು ತಪ್ಪಿತಸ್ಥನಲ್ಲ ಹಾಗೂ ಬಿಡುಗಡೆಯಾದ ನಂತರ ಅಂತಹ ಅಪರಾಧವನ್ನು ಮಾಡುವ ಸಾಧ್ಯತೆಯಿಲ್ಲ ಎಂದು ಮನವರಿಕೆ ಮಾಡಿದಾಗ ಮಾತ್ರ ಷರತ್ತುಗಳು ಅನ್ವಯಿಸುತ್ತವೆ. ಈ ವೇಳೆ ಅಂತಹ ಆರೋಪಿಗೆ ಜಾಮೀನು ನೀಡಬಹುದು. ವಿಶೇಷ ನ್ಯಾಯಾಲಯವು ಅಪರಾಧದ ಅರಿವು ಪಡೆಯುವ ಪ್ರಕರಣಗಳಲ್ಲಿ ಕೂಡ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿಯು ಜಾಮೀನಿಗಾಗಿ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕೆ ಎಂಬ ಪ್ರಶ್ನೆಗೆ ಸುಪ್ರೀಂಕೋರ್ಟ್ ಈ ತೀರ್ಪು ನೀಡಿದೆ.
Advertisement