
ನವದೆಹಲಿ: ಕೇಂದ್ರ ದೆಹಲಿಯಲ್ಲಿರುವ ದೆಹಲಿ ಬಿಜೆಪಿ ಕಚೇರಿಯಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ.
ಅಧಿಕಾರಿಗಳ ಪ್ರಕಾರ, ಸಂಜೆ 4.25 ರ ಸುಮಾರಿಗೆ ಪಂಡಿತ್ ಪಂತ್ ಮಾರ್ಗ್‌ದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡದ ಕುರಿತು ಮಾಹಿತಿ ಬಂದಿತು.
"ತಕ್ಷಣ ಮೂರು ಅಗ್ನಿಶಾಮಕ ವಾಹನಗಳನ್ನು ರವಾನಿಸಲಾಯಿತು ಮತ್ತು ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು" ಎಂದು ಡಿಎಫ್‌ಎಸ್ ಅಧಿಕಾರಿ ತಿಳಿಸಿದರು.
ವಿದ್ಯುತ್ ಮೀಟರ್ ಬಾಕ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಣ್ಣ ಪ್ರಮಾಣದ ಬೆಂಕಿ ಅವಘಡ ಸಂಭವಿಸಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ತನಿಖೆಗಾಗಿ ನಾವು ಪೊಲೀಸರಿಗೆ ವಿಷಯವನ್ನು ತಿಳಿಸಿದ್ದೇವೆ ಎಂದು ಡಿಎಫ್‌ಎಸ್ ಅಧಿಕಾರಿ ಹೇಳಿದ್ದಾರೆ.
Advertisement