ಕೇರಳ ವೈದ್ಯರ ಎಡವಟ್ಟು: ಸರ್ಕಾರಿ ಆಸ್ಪತ್ರೆಯಲ್ಲಿ 4 ವರ್ಷದ ಮಗುವಿನ ಬೆರಳಿಗೆ ಬದಲಾಗಿ ನಾಲಿಗೆಗೆ ಶಸ್ತ್ರಚಿಕಿತ್ಸೆ!

ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರು ಗುರುವಾರ 4 ವರ್ಷದ ಬಾಲಕಿಯ ಬೆರಳಿನ ಶಸ್ತ್ರಚಿಕಿತ್ಸೆಗೆ ಬದಲಾಗಿ ಆಕೆಯ ನಾಲಿಗೆಗೆ ಶಸ್ತ್ರಚಿಕಿತ್ಸೆ ನಡೆಸಿದ ಪ್ರಮಾದ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಕೋಝಿಕ್ಕೋಡ್: ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರು ಗುರುವಾರ 4 ವರ್ಷದ ಬಾಲಕಿಯ ಬೆರಳಿನ ಶಸ್ತ್ರಚಿಕಿತ್ಸೆಗೆ ಬದಲಾಗಿ ಆಕೆಯ ನಾಲಿಗೆಗೆ ಶಸ್ತ್ರಚಿಕಿತ್ಸೆ ನಡೆಸಿದ ಪ್ರಮಾದ ನಡೆದಿದೆ.

ನಾಲ್ಕು ವರ್ಷದ ಮಗುವಿಗೆ ಆರು ಬೆರಳುಗಳಿದ್ದವು. ಇದರಲ್ಲಿ ಆರನೇ ಬೆರಳನ್ನು ತೆಗೆಯಲು ಶಸ್ತ್ರಚಿಕಿತ್ಸೆ ನಡೆಸಬೇಕಿತ್ತು. ಆದರೆ ಬದಲಾಗಿ ಮಗುವಿನ ನಾಲಿಗೆಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ಮಗುವಿನ ಬಾಯಿಯಲ್ಲಿ ಹತ್ತಿ ತುಂಬಿರುವುದನ್ನು ನೋಡಿ ಪೋಷಕರು ಈ ಬಗ್ಗೆ ಪ್ರಶ್ನಿಸಿದಾಗ ತಪ್ಪು ಬೆಳಕಿಗೆ ಬಂದಿದೆ.

ಈ ಬಗ್ಗೆ ಕುಟುಂಬಸ್ಥರು ಆರೋಪಿಸಿದ್ದು ಹೆಚ್ಚಿನ ತನಿಖೆಗೆ ಆರೋಗ್ಯ ಸಚಿವೆ ವೀಣಾ ಆಗ್ರಹಿಸಿದ್ದಾರೆ. ತಕ್ಷಣ ತನಿಖೆ ನಡೆಸಿ ಸಮಗ್ರ ವರದಿಯನ್ನು ಸಲ್ಲಿಸುವಂತೆ ವೈದ್ಯಕೀಯ ಶಿಕ್ಷಣ ನಿರ್ದೇಶಕರಿಗೆ ಸೂಚಿಸಿದ್ದು, ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಲು ಉದ್ದೇಶಿಸಿದ್ದಾರೆ.

ಸಂಗ್ರಹ ಚಿತ್ರ
Covishield ಅಷ್ಟೇ ಅಲ್ಲ, Covaxin ಲಸಿಕೆಯಿಂದಲೂ ಅಡ್ಡ ಪರಿಣಾಮ ಇದೆ: ಹೊಸ ಅಧ್ಯಯನ

ತಪ್ಪುಗಳು ಅನುಭವವಾಗಬಾರದು. ಶಸ್ತ್ರಚಿಕಿತ್ಸೆಗೆ ಒಳಗಾದ ಮಗುವಿನ ನಾಲಿಗೆಗೆ ಯಾವುದೇ ತೊಂದರೆ ಇರಲಿಲ್ಲ. ಆದರೆ ಈ ಶಸ್ತ್ರ ಚಿಕಿತ್ಸೆಯಿಂದ ಮಗುವಿನ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಉಂಟಾದರೆ ಆಸ್ಪತ್ರೆಯ ಅಧಿಕಾರಿಗಳು ಜವಾಬ್ದಾರರಾಗಿರುತ್ತಾರೆ. ಆಸ್ಪತ್ರೆ ಅಧಿಕಾರಿಗಳು ನಮಗೆ ಮಾಹಿತಿ ನೀಡಿದರು. ಒಂದೇ ದಿನಾಂಕದಂದು ಇಬ್ಬರು ಮಕ್ಕಳಿಗೆ ಶಸ್ತ್ರಚಿಕಿತ್ಸೆಯನ್ನು ನಿಗದಿಪಡಿಸಿದ್ದರಿಂದ ತಪ್ಪಾಗಿದೆ ಎಂದು ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com