ನರೇಂದ್ರ ಮೋದಿ ಮತ್ತು ಶ್ಯಾಮ್ ರಂಗೀಲಾ
ನರೇಂದ್ರ ಮೋದಿ ಮತ್ತು ಶ್ಯಾಮ್ ರಂಗೀಲಾ

ನಗುವುದೋ, ಅಳುವುದೋ?: ಪಿಎಂ ಮೋದಿ ವಿರುದ್ಧ ಕಣಕ್ಕಿಳಿದಿದ್ದ ಕಾಮಿಡಿಯನ್ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ!

ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿ, ನಾಮಪತ್ರ ಸಲ್ಲಿಸಿದ್ದ ಕಾಮಿಡಿಯನ್ ಶ್ಯಾಮ್ ರಂಗೀಲಾ ಅವರ ನಾಮಪತ್ರವನ್ನು ತಿರಸ್ಕೃತವಾಗಿದೆ.
Published on

ವಾರಣಾಸಿ: ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿ, ನಾಮಪತ್ರ ಸಲ್ಲಿಸಿದ್ದ ಕಾಮಿಡಿಯನ್ ಶ್ಯಾಮ್ ರಂಗೀಲಾ ಅವರ ನಾಮಪತ್ರವನ್ನು ತಿರಸ್ಕೃತವಾಗಿದೆ.

ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿಯವರ ಧ್ವನಿಯನ್ನು ಅನುಕರಿಸುವ ಮೂಲಕ ದೇಶದಲ್ಲೆಡೆ ಸುದ್ದಿಯಾಗಿದ್ದ ಶ್ಯಾಮ್ ರಂಗೀಲಾ, ತಾನು ನಾಮಪತ್ರದ ಅರ್ಜಿಯನ್ನು ಪಡೆಯಲು ತೊಂದರೆ ಎದುರಿಸುತ್ತಿದ್ದೇನೆ, ಅಧಿಕಾರಿಗಳು ನಾಮಪತ್ರದ ಅರ್ಜಿಯನ್ನು ಕೊಡುತ್ತಿಲ್ಲ ಎಂದು ಆರೋಪಿಸಿದ್ದರು.

ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ
ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್‌ ಸೇರಿದಂತೆ 15 ಅಭ್ಯರ್ಥಿಗಳ ನಾಮಪತ್ರಗಳನ್ನು ಸ್ವೀಕರಿಸಲಾಗಿದೆ ಎಂಬ ಮಾಹಿತಿಯನ್ನು ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಹಂಚಿಕೊಂಡಿದೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಹಾಸ್ಯದ ಮೂಲಕ ಹಿಂದಿ ಭಾಷಿಕ ರಾಜ್ಯಗಳಲ್ಲಿ ಜನಪ್ರಿಯತೆ ಗಳಿಸಿರುವ ಶ್ಯಾಮ್‌ ರಂಗೀಲಾ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವುದಾಗಿ ಇತ್ತೀಚೆಗೆ ಘೋಷಿಸಿದ್ದರು. ನಾಮಪತ್ರ ಸಲ್ಲಿಸುವ ಕೊನೆಯ ದಿನ ಮೇ 14ರಂದು ವಾರಾಣಸಿಗೆ ಬಂದು ನಾಮಪತ್ರ ಸಲ್ಲಿಸಿದ್ದರು.

ನರೇಂದ್ರ ಮೋದಿ ಮತ್ತು ಶ್ಯಾಮ್ ರಂಗೀಲಾ
ದೇಶ 10 ವರ್ಷಗಳಲ್ಲಿ ಏನೆಲ್ಲಾ ಬದಲಾಗಿದೆ: ಪ್ರಧಾನಿ ನರೇಂದ್ರ ಮೋದಿ ಹೊಗಳಿದ 'ಕಿರಿಕ್' ಬ್ಯೂಟಿ ರಶ್ಮಿಕಾ!

ನಾಮ ಪತ್ರ ಸಲ್ಲಿಸಿ ಶ್ಯಾಮ್ ರಂಗೀಲಾ ಚುನಾವಣಾಧಿಕಾರಿಯ ಕಚೇರಿಯಿಂದ ಹೊರಬರುತ್ತಿದ್ದಂತೆಯೇ, ನಾಮಪತ್ರ ಸಲ್ಲಿಸಿರುವುದೇ ನಮ್ಮ ವಿಜಯ ಎಂದು ಹೇಳುತ್ತಾ, ವಿಕ್ಟರಿ ಚಿಹ್ನೆಯನ್ನು ಪ್ರದರ್ಶಿಸಿದ್ದರು. ಆದರೆ, ನಾಮಪತ್ರ ಸಲ್ಲಿಸಿ 24 ಗಂಟೆಯೊಳಗೆ ತಿರಸ್ಕರಿಸಲಾಗಿದೆ.

ಈ ಬಗ್ಗೆ ಬೇಸರ ವ್ಯಕ್ತಪಡಿಸಿ 12 ನಿಮಿಷದ ವಿಡಿಯೋ ಹಂಚಿಕೊಂಡಿರುವ ಶ್ಯಾಮ್ ರಂಗೀಲಾ, “ಕೇವಲ 24 ಗಂಟೆಯೊಳಗೆ ನನ್ನ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ನನ್ನನ್ನು ವಾರಣಾಸಿಯಿಂದ ಚುನಾವಣೆಗೆ ಸ್ಪರ್ಧಿಸಲು ಬಿಡುವುದಿಲ್ಲ ಎಂಬುದು ಈಗಾಗಲೇ ನಿರ್ಧರಿಸಲಾಗಿದೆ ಎಂದು ಈಗ ಸ್ಪಷ್ಟವಾಗಿದೆ. ಮನಸ್ಸು ಖಂಡಿತವಾಗಿಯೂ ಒಡೆದಿದೆ. ಆದರೆ ಉತ್ಸಾಹವು ಕುಗ್ಗಿಲ್ಲ. ನಿಮ್ಮ ಸಹಕಾರಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ಮಾಧ್ಯಮಗಳು ಮತ್ತು ಹಿತೈಷಿಗಳು ದಯವಿಟ್ಟು ಈಗ ಕರೆ ಮಾಡಬೇಡಿ ಎಂದು ನಾನು ವಿನಂತಿಸುತ್ತೇನೆ. ನನ್ನ ಬಳಿ ಏನೇ ಮಾಹಿತಿ ಇದ್ದರೂ ಅದನ್ನು ಟ್ವೀಟ್ ಮೂಲಕವೇ ಹಂಚಿಕೊಳ್ಳುತ್ತಲೇ ಇರುತ್ತೇನೆ. ಸ್ವಲ್ಪ ಸಮಯದವರೆಗೆ ಮಾತನಾಡಬೇಕು ಎಂದು ನನಗೆ ಅನಿಸುತ್ತಿಲ್ಲ” ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com