
ನವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ವಿರುದ್ಧದ ಹಲ್ಲೆ ಪ್ರಕರಣದಲ್ಲಿ ಕೇಜ್ರಿವಾಲ್ ಆಪ್ತನಿಗೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್ ಸಿಡಬ್ಲ್ಯು) ಸಮನ್ಸ್ ಜಾರಿಗೊಳಿಸಿದೆ. ವಿಭವ್ ಕುಮಾರ್ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದು, ಆತನನ್ನು ವಿಚಾರಣೆಗೆ ಶುಕ್ರವಾರದಂದು ಬೆಳಿಗ್ಗೆ 11 ಗಂಟೆಗೆ ಹಾಜರಾಗಲು ಸೂಚಿಸಲಾಗಿದೆ.
ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) "ಮಾಜಿ ಡಿಸಿಡಬ್ಲ್ಯೂ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ" ಎಂಬ ಶೀರ್ಷಿಕೆಯ ಮಾಧ್ಯಮ ಪೋಸ್ಟ್ ನ್ನು ಆಧರಿಸಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ. ಮಾಧ್ಯಮ ವರದಿಯಲ್ಲಿ ಸ್ವಾತಿ ಮಾಲಿವಾಲ್ ಮುಖ್ಯಮಂತ್ರಿಯ ನಿವಾಸದಲ್ಲಿ ವಿಭವ್ ತಮ್ಮ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ಈ ಆರೋಪಗಳ ಹಿನ್ನೆಲೆಯಲ್ಲಿ, ಆಯೋಗ ನೋಟಿಸ್ ಜಾರಿಗೊಳಿಸಿದೆ. ನೊಟೀಸ್ ನ್ನು ಅನುಸರಿಸಲು ವಿಫಲವಾದರೆ ಅಗತ್ಯವೆಂದು ಪರಿಗಣಿಸಿದ ಮುಂದಿನ ಕ್ರಮಗಳಿಗೆ ದಾರಿ ಮಾಡಿಕೊಡಲಿದೆ ಎಂದು ಆಯೋಗ ಹೇಳಿದೆ.
ಸ್ವಾತಿ ಮಲಿವಾಲ್ ಅಧಿಕೃತವಾಗಿ ಇನ್ನಷ್ಟೇ ದೂರು ದಾಖಲಿಸಬೇಕಿದೆ. ಮಂಗಳವಾರ, ಸಂಜಯ್ ಸಿಂಗ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಮಲಿವಾಲ್ ಅವರೊಂದಿಗಿನ ಘಟನೆಯು "ಅತ್ಯಂತ ಖಂಡನೀಯ" ಎಂದು ಹೇಳಿದರು.
Advertisement