ಕರ್ನಾಟಕದಲ್ಲಿ ನೀರಿನ ಅಭಾವ: ತಮಿಳುನಾಡಿನ ಬೇಡಿಕೆ ತಿರಸ್ಕರಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ

ಬಾಕಿ ಇರುವ ನೀರನ್ನು ಬಿಡುಗಡೆ ಮಾಡಲು ಮತ್ತು ರಾಜ್ಯಕ್ಕೆ ಕಾವೇರಿ ನದಿ ನೀರು ಹರಿವಿನಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂಬ ತಮಿಳುನಾಡಿನ ಬೇಡಿಕೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಗುರುವಾರ ತಿರಸ್ಕರಿಸಿದೆ.
ಕಾವೇರಿ ನದಿ ನೀರು
ಕಾವೇರಿ ನದಿ ನೀರು
Updated on

ನವದೆಹಲಿ: ಬಾಕಿ ಇರುವ ನೀರನ್ನು ಬಿಡುಗಡೆ ಮಾಡಲು ಮತ್ತು ರಾಜ್ಯಕ್ಕೆ ಕಾವೇರಿ ನದಿ ನೀರು ಹರಿವಿನಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂಬ ತಮಿಳುನಾಡಿನ ಬೇಡಿಕೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಗುರುವಾರ ತಿರಸ್ಕರಿಸಿದೆ.

ಉಭಯ ರಾಜ್ಯಗಳು ತಮ್ಮ ಕುಡಿಯುವ ನೀರಿನ ಅವಶ್ಯಕತೆಗೆ ಆದ್ಯತೆ ನೀಡುವಂತೆ ಸಮಿತಿ ಆದೇಶಿಸಿದೆ. ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಯನ್ನು ಹಂಚಿಕೊಳ್ಳುವ ಉಭಯ ರಾಜ್ಯಗಳಲ್ಲಿ ನೀರಿನ ಕೊರತೆಯನ್ನು ನಿವಾರಿಸಿದೆ. ಪ್ರತಿ ದಿನ ಕೇವಲ 150 ಕ್ಯೂಸೆಕ್ ನೀರು ಬರುತ್ತಿದ್ದ ಅಂತರರಾಜ್ಯ ಗಡಿ ಬಿಂದು ಬಿಳಿಗುಂಡ್ಲುವಿಗೆ ಕಳೆದ ಐದು ದಿನಗಳಿಂದ ದಿನಕ್ಕೆ ಸುಮಾರು 1,100 ಕ್ಯೂಸೆಕ್ ನೀರು ಬರುತ್ತಿದೆ.

96ನೇ ಸಭೆಯ ಅಧ್ಯಕ್ಷತೆಯ ನಂತರ ಟಿಎನ್ಐಇ ಜೊತೆಗೆ ಮಾತನಾಡಿದ ಸಿಡಬ್ಲ್ಯುಆರ್‌ಸಿ ಅಧ್ಯಕ್ಷ ವಿನೀತ್ ಗುಪ್ತಾ, ಎರಡೂ ರಾಜ್ಯಗಳು ತಮ್ಮ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ಆಯಾ ಜಲಾಶಯಗಳಲ್ಲಿ ಸಾಕಷ್ಟು ನೀರನ್ನು ಹೊಂದಿವೆ ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್ ಮಾರ್ಪಡಿಸಿದ ಕಾವೇರಿ ಜಲವಿವಾದ ನ್ಯಾಯಮಂಡಳಿಯ (ಸಿಡಬ್ಲ್ಯುಡಿಟಿ) ಅಂತಿಮ ತೀರ್ಪಿನ ಪ್ರಕಾರ, ಪರಿಸರ ಹರಿವನ್ನು ಕಾಪಾಡಿಕೊಳ್ಳುವಂತೆ ಕರ್ನಾಟಕಕ್ಕೆ ಸಮಿತಿ ಆದೇಶಿಸಿದೆ.

ಕಾವೇರಿ ನದಿ ನೀರು
ಉಗಮ ಸ್ಥಾನದಲ್ಲೆ ಬರಿದಾದ ಕಾವೇರಿ; ಕೊಡಗಿನಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ!

ಸಿಡಬ್ಲ್ಯುಡಿಟಿ ಪ್ರಕಾರ, ಕರ್ನಾಟಕವು ಫೆಬ್ರುವರಿಯಿಂದ ಮೇವರೆಗೆ ದಿನಕ್ಕೆ ಸುಮಾರು 1,000 ಕ್ಯೂಸೆಕ್‌ ನೀರು ಬಿಡುವ ಮೂಲಕ ಬಿಳಿಗುಂಡ್ಲುವಿನಲ್ಲಿ ಪರಿಸರದ ಹರಿವನ್ನು ಕಾಪಾಡಿಕೊಳ್ಳಬೇಕು. ಈ ಆದೇಶವು ಸಾಮಾನ್ಯ ವರ್ಷಕ್ಕೆ ಅನ್ವಯವಾಗುತ್ತದೆ ಮತ್ತು ಬರದಿಂದ ತತ್ತರಿಸಿರುವ 2023-24 ರಂತಹ ಸಂಕಷ್ಟದ ವರ್ಷಕ್ಕೆ ಅಲ್ಲ ಎಂದಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿಗೆ (ಸಿಡಬ್ಲ್ಯುಆರ್‌ಸಿ) ಸಲ್ಲಿಸಿರುವ ಅರ್ಜಿಯಲ್ಲಿ, ತಮಿಳುನಾಡು ರಾಜ್ಯವು ಸಂಕಷ್ಟದ ವರ್ಷಗಳಲ್ಲಿ ನೀರು ಹಂಚಿಕೆ ಮಾಡಲು ವೈಜ್ಞಾನಿಕವಾಗಿ ಆಧಾರಿತ ಸೂತ್ರಕ್ಕಾಗಿ ವಿನಂತಿ ಮಾಡಿದೆ.

ಕಾವೇರಿ ನದಿ ನೀರು
ನಿತ್ಯ 3 ಸಾವಿರ ಕ್ಯೂಸೆಕ್ ನೀರು: CWRC ಆದೇಶ ಪಾಲಿಸುವಂತೆ ಕರ್ನಾಟಕಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ

ತಮಿಳು ದೈನಿಕದ ಆರೋಪಗಳನ್ನು ತಳ್ಳಿಹಾಕಿದ ಸರ್ಕಾರ

ಚೆನ್ನೈ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಗಳಿಗೆ ಖುದ್ದಾಗಿ ಹಾಜರಾಗದಂತೆ ಮತ್ತು ಆನ್‌ಲೈನ್‌ನಲ್ಲಿ ಮಾತ್ರವೇ ಹಾಜರಾಗಬೇಕೆಂದು ಜಲಸಂಪನ್ಮೂಲ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂಬ ಆರೋಪವನ್ನು ರಾಜ್ಯ ಸರ್ಕಾರ ಗುರುವಾರ ತಳ್ಳಿಹಾಕಿದೆ.

'ತಮಿಳು ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ ಸುದ್ದಿ ಸುಳ್ಳು. ಸರ್ಕಾರವು ಅಂತಹ ಯಾವುದೇ ಆದೇಶವನ್ನು ನೀಡಿಲ್ಲ. ಅಧಿಕಾರಿಗಳು ತಪ್ಪದೆ ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ' ಎಂದು ಪ್ರಕಟಣೆ ತಿಳಿಸಿದೆ.

ಈಮಧ್ಯೆ, ಆನ್‌ಲೈನ್‌ನಲ್ಲಿ ಮಾತ್ರ ಸಭೆಗಳಿಗೆ ಹಾಜರಾಗುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ಡಿಎಂಕೆ ಸರ್ಕಾರದ ನಡೆಯನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಎಎಂಎಂಕೆ ಮುಖ್ಯಸ್ಥ ಟಿಟಿವಿ ದಿನಕರನ್ ಖಂಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com