
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಶುಕ್ರವಾರ ದೆಹಲಿ ಮೆಟ್ರೋ ರೈಲಿನಲ್ಲಿ ಲಕ್ಷ್ಮಿ ನಗರಕ್ಕೆ ಪ್ರಯಾಣ ಬೆಳೆಸಿದ್ದರು. ಪ್ರಯಾಣದ ಸಮಯದಲ್ಲಿ ಸಹ ಪ್ರಯಾಣಿಕರೊಂದಿಗೆ ಸಾಮಾನ್ಯ ವ್ಯಕ್ತಿಯಂತೆ ಮಾತನಾಡುತ್ತಾ ಸಾಗಿದರು.
ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಯಾಣದ ಫೋಟೋ ವಿಡಿಯೊಗಳನ್ನು ಹಂಚಿಕೊಂಡಿದ್ದಾರೆ. ದೆಹಲಿ ಮೆಟ್ರೋದಲ್ಲಿ ನಿರ್ಮಲಾ ಸೀತಾರಾಮನ್ ಪ್ರಯಾಣಿಸುವ ವೀಡಿಯೊಗೆ ನೆಟಿಜನ್‌ಗಳು ಹಲವು ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ತೆರಿಗೆ ಸಂಬಂಧಿತ ಪ್ರಶ್ನೆಯನ್ನು ಕೇಳಬೇಕಿತ್ತು ಎಂದು ಒಬ್ಬ ಬಳಕೆದಾರರು ಬರೆದಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕ ಸಾರಿಗೆಯನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಮತ್ತು ಸಹ ಪ್ರಯಾಣಿಕರೊಂದಿಗೆ ತೊಡಗಿಸಿಕೊಳ್ಳುವ ಮೂಲಕ ಉದಾಹರಣೆಯಾಗಿ ಮುನ್ನಡೆಸುತ್ತಿರುವುದನ್ನು ನೋಡುವುದು ಸಂತೋಷಕರವಾಗಿದೆ" ಎಂದು ಇನ್ನೊಬ್ಬ ವ್ಯಕ್ತಿ ಪೋಸ್ಟ್ ಮಾಡಿದ್ದಾರೆ.
ಇಲ್ಲಿ ಮತ್ತೊಂದು ಆಸಕ್ತಿಕರ ವಿಷಯವೆಂದರೆ ಮಹಿಳೆಯೊಬ್ಬರು ತಾವು ಇಳಿಯಬೇಕಾದ ನಿಲ್ದಾಣ ಬಂದಾಗ ಸಚಿವೆಯ ಹಿಂದಿನಿಂದ ಸಾಗಿ ಅವರ ಬೆನ್ನ ಮೇಲೆ ತಟ್ಟುತ್ತಾರೆ. ಅದಕ್ಕೆ ತಿರುಗಿ ನೋಡಿದ ನಿರ್ಮಲಾ ಅವರು ನಗುವಿನ ಮೂಲಕ ಪ್ರತಿಕ್ರಿಯಿಸುತ್ತಾರೆ. ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಹಜ ವರ್ತನೆ ಎಂದು ಜನರಿಗೆ ಭಾಸವಾಗಿದೆ.
Advertisement