ದೇಶ

ಮನೆಯಿಂದಲೇ ಮತ ಚಲಾಯಿಸಿದ ಡಾ. ಮನಮೋಹನ್ ಸಿಂಗ್, ಎಲ್ ಕೆ ಅಡ್ವಾಣಿ!

ಮನೆಯಿಂದಲೇ ಮತ ಚಲಾಯಿಸಿದ ಡಾ. ಮನಮೋಹನ್ ಸಿಂಗ್, ಎಲ್ ಕೆ ಅಡ್ವಾಣಿ!
ಎಲ್ ಕೆ ಅಡ್ವಾಣಿ, ಡಾ. ಮನಮೋಹನ್ ಸಿಂಗ್
Published On :

ನವದೆಹಲಿ: ಮಾಜಿ ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಮತ್ತು ಕೇಂದ್ರದ ಮಾಜಿ ಸಚಿವ ಡಾ.ಮುರಳಿ ಮನೋಹರ್ ಜೋಶಿ ಅವರು ಮನೆಯಿಂದಲೇ ಮತದಾನ ಮಾಡುವ ಸೌಲಭ್ಯ ಬಳಸಿಕೊಂಡು ಮತ ಚಲಾಯಿಸಿದ್ದಾರೆ ಎಂದು ದೆಹಲಿ ಚುನಾವಣಾ ಸಂಸ್ಥೆ ತಿಳಿಸಿದೆ.

ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿಯು ಗುರುವಾರ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗಾಗಿ ಮನೆಯಿಂದಲೇ ಮತದಾನ ವ್ಯವಸ್ಥೆಯನ್ನು ಆರಂಭಿಸಿತು. ಇದು ಮೇ 24 ರವರೆಗೆ ಮುಂದುವರಿಯುತ್ತದೆ.

"ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಮತ್ತು ಮಾಜಿ ಕೇಂದ್ರ ಸಚಿವ ಡಾ. ಮುರಳಿ ಮನೋಹರ್ ಜೋಶಿ ಅವರು ಮೇ 17 ರಂದು ನವದೆಹಲಿ ಲೋಕಸಭಾ ಕ್ಷೇತ್ರದಲ್ಲಿ ಮನೆಯಿಂದಲೇ ಮತದಾನ ಸೌಲಭ್ಯ ಪಡೆದುಕೊಂಡು ಯಶಸ್ವಿಯಾಗಿ ಮತದಾನ ಮಾಡಿದರು" ಎಂದು ಕಚೇರಿ ತಿಳಿಸಿದೆ. ಮಾಜಿ ಉಪ ರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ ಗುರುವಾರ ಮತ ಚಲಾಯಿಸಿದರು. ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಶನಿವಾರ ಮತ ಚಲಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೊದಲ ದಿನ 1,482 ಮತದಾರರು ಮನೆಯಿಂದಲೇ ತಮ್ಮ ಹಕ್ಕು ಚಲಾಯಿಸಿದರು.

ದೆಹಲಿಯಾದ್ಯಂತ ಒಟ್ಟು 5,406 ಹಿರಿಯ ನಾಗರಿಕರು ಮತ್ತು ದಿವ್ಯಾಂಗರು ಲೋಕಸಭಾ ಚುನಾವಣೆಯಲ್ಲಿ ಮನೆಯಿಂದಲೇ ಮತದಾನ ಮಾಡಲು ಫಾರ್ಮ್ 12 ಡಿ ಭರ್ತಿ ಮಾಡಿದ್ದಾರೆ. ಈ ಕ್ರಮವು ಇಂತಹ ಮತದಾರರು ಸುಲಭ ಮತ್ತು ಘನತೆಯಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದೆಂದು ಖಚಿತಪಡಿಸುತ್ತದೆ. ಮತದಾನ ಕೇಂದ್ರಗಳಿಗೆ ಭೇಟಿ ನೀಡುವ ಅಗತ್ಯವನ್ನು ನಿವಾರಿಸುತ್ತದೆ. ದೆಹಲಿಯಲ್ಲಿ ಮೇ 25 ರಂದು ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.