
ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಾಲೀವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಗೆ 5 ದಿನಗಳ ಪೊಲೀಸ್ ಕಸ್ಟಡಿ ವಹಿಸಲಾಗಿದೆ.
ಪ್ರಕರಣದಲ್ಲಿ ಪೊಲೀಸ್ ರಿಮ್ಯಾಂಡ್ ಅಗತ್ಯವಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ದೆಹಲಿ ಪೊಲೀಸ್ ಅರ್ಜಿ ವಿಚಾರಣೆ ನಡೆಸಿದೆ. ಪೊಲೀಸ್ ಅಧಿಕಾರಿಗಳು ಬಿಭವ್ ಕುಮಾರ್ ನ್ನು 7 ದಿನಗಳ ಕಸ್ಟಡಿಗೆ ಕೇಳಿದ್ದರು.
ಕೇಜ್ರಿವಾಲ್ ಆಪ್ತ ಸಹಾಯಕರಾಗಿರುವ ಕುಮಾರ್ ಅವರು ಮೇ 13 ರಂದು ಸಿಎಂ ನಿವಾಸದಲ್ಲಿ ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.
"ಎರಡೂ ಪಕ್ಷಗಳ ಪರವಾಗಿ ಸಲ್ಲಿಸಿದ ಸಲ್ಲಿಕೆಗಳನ್ನು ಪರಿಗಣಿಸಿ, ಪ್ರಸ್ತುತ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಗೆ ನೀಡಬೇಕಾದ ಅವಶ್ಯಕತೆಯಿದೆ ಎಂದು ನಾನು ಕಂಡುಕೊಂಡಿದ್ದೇನೆ. ಅದರಂತೆ, ತನಿಖಾಧಿಕಾರಿ ಸಲ್ಲಿಸಿದ ಅರ್ಜಿಯನ್ನು ಭಾಗಶಃ ಅನುಮತಿಸಲಾಗಿದೆ ಮತ್ತು ಆರೋಪಿಯನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ," ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಭಾನುವಾರ ಮಧ್ಯಾಹ್ನ ಹೇಳಿದೆ.
Advertisement