ಛತ್ತೀಸ್‌ಗಢ: ಮಿನಿ ಗೂಡ್ಸ್ ವಾಹನ ಕಣಿವೆಗೆ ಉರುಳಿ 18 ಮಂದಿ ದುರ್ಮರಣ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಕವರ್ಧಾ: ಛತ್ತೀಸ್‌ಗಢದ ಕಬೀರ್‌ಧಾಮ್ ಜಿಲ್ಲೆಯಲ್ಲಿ ಸೋಮವಾರ ಮಿನಿ ಗೂಡ್ಸ್ ವಾಹನವೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ ಹದಿನೇಳು ಮಹಿಳೆಯರು ಮತ್ತು ಓರ್ವ ಪುರುಷ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಕ್ದೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಹಪಾನಿ ಗ್ರಾಮದ ಬಳಿಯ ಬಂಜಾರಿ ಘಾಟ್‌ನಲ್ಲಿ ಮಧ್ಯಾಹ್ನ 1.45 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂತ್ರಸ್ತರು ಮಿನಿ ಗೂಡ್ಸ್ ವಾಹನದಲ್ಲಿ ಅರಣ್ಯದಿಂದ ಟೆಂಡು ಎಲೆಗಳನ್ನು ಕಿತ್ತು ಹಿಂತಿರುಗುತ್ತಿದ್ದರು. ವಾಹನವು ರಸ್ತೆಯಿಂದ ಸ್ಕಿಡ್ ಆಗಿ ಕಣಿವೆಗೆ ಉರುಳಿ ಬಿದ್ದಿದೆ. ನಂತರ, ಪೊಲೀಸ್ ತಂಡವ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿತು ಎಂದು ಅವರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಎರಡು ವಾಹನಗಳ ನಡುವೆ ಡಿಕ್ಕಿ, 6 ಮಂದಿ ದುರ್ಮರಣ

"ಹನ್ನೆರಡು ಮಹಿಳೆಯರು ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವನ್ನಪ್ಪಿದರೆ ಆಸ್ಪತ್ರೆಗೆ ಸಾಗಿಸಲಾಗಿದ್ದಒಂಬತ್ತು ಮಂದಿಯಲ್ಲಿ ಐವರು ಮಹಿಳೆಯರು ಸಾವನ್ನಪ್ಪಿದ್ದಾರೆ" ಎಂದು ಕಬೀರ್ಧಾಮ್ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ. ಮೂವರು ಮಹಿಳೆಯರು ಸೇರಿದಂತೆ ಉಳಿದ ನಾಲ್ವರು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಲಾಗಿದೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ವಿಷ್ಣು ದೇವ ಸಾಯಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com