5ನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ಆರಂಭ: ದ್ವೇಷಕ್ಕಾಗಿ ಅಲ್ಲ ಪ್ರೀತಿಗೆ ಮತ ನೀಡಿ- ಮಲ್ಲಿಕಾರ್ಜುನ ಖರ್ಗೆ

ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ 49 ಕ್ಷೇತ್ರಗಳಲ್ಲಿ ಮತದಾನ ಆರಂಭಗೊಂಡಿದ್ದು, ಜನರು ಪ್ರೀತಿಗಾಗಿ ಮತ ಚಲಾಯಿಸಬೇಕು ಮತ್ತು ದ್ವೇಷಕ್ಕಾಗಿ ಮತ ಚಲಾಯಿಸಬಾರದು ಮತ್ತು ನಿರುದ್ಯೋಗ ಮತ್ತು ಹಣದುಬ್ಬರದ ವಿರುದ್ಧ ಮತ ಚಲಾಯಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Updated on

ನವದೆಹಲಿ: ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ 49 ಕ್ಷೇತ್ರಗಳಲ್ಲಿ ಮತದಾನ ಆರಂಭಗೊಂಡಿದ್ದು, ಜನರು ಪ್ರೀತಿಗಾಗಿ ಮತ ಚಲಾಯಿಸಬೇಕು ಮತ್ತು ದ್ವೇಷಕ್ಕಾಗಿ ಮತ ಚಲಾಯಿಸಬಾರದು ಮತ್ತು ನಿರುದ್ಯೋಗ ಮತ್ತು ಹಣದುಬ್ಬರದ ವಿರುದ್ಧ ಮತ ಚಲಾಯಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಐದನೇ ಹಂತದಲ್ಲಿ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಸ್ಮೃತಿ ಇರಾನಿ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿದಂತೆ ಹಲವು ಪ್ರಮುಖ ನಾಯಕರ ಚುನಾವಣಾ ಭವಿಷ್ಯ ನಿರ್ಧಾರವಾಗಲಿದೆ.

ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, "ನಾವು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಬೇಕಾದರೆ, ನಾವು ಮತದಾನ ಮಾಡಬೇಕು, ಇವಿಎಂ ಬಟನ್ ಒತ್ತುವ ಮೊದಲು, ನಾವು ದ್ವೇಷಕ್ಕಾಗಿ ಅಲ್ಲ, ಪ್ರೀತಿ ಮತ್ತು ಸಹೋದರತ್ವಕ್ಕಾಗಿ ಮತ ಚಲಾಯಿಸಬೇಕು ಎಂಬುದನ್ನು ನೆನಪಿಡಿ. ನಿರುದ್ಯೋಗ ಮತ್ತು ಹಣದುಬ್ಬರದ ವಿರುದ್ಧ ಮತ ಚಲಾಯಿಸಿ, ಕೆಲವು ಬಂಡವಾಳಶಾಹಿಗಳನ್ನು ಶ್ರೀಮಂತರನ್ನಾಗಿ ಮಾಡಲು ಅಲ್ಲ, ನಮ್ಮ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ನಾವು ಮತ ಚಲಾಯಿಸಬೇಕು, ನಮ್ಮ ಹಕ್ಕುಗಳನ್ನು ಕಸಿದುಕೊಳ್ಳುವವರಿಗೆ ಅಲ್ಲ ಎಂದು ಖರ್ಗೆ ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ
INDIA ಮೈತ್ರಿಕೂಟಕ್ಕೆ 'ಮಹಾ' ನಿರೀಕ್ಷೆ; ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ 46 ಸ್ಥಾನಗಳ ಗೆಲುವಿನ ವಿಶ್ವಾದಲ್ಲಿ ಖರ್ಗೆ, ಪವಾರ್!

ಪ್ರಜಾಪ್ರಭುತ್ವಕ್ಕಾಗಿ ಮತ ಚಲಾಯಿಸಿ, ಸರ್ವಾಧಿಕಾರಕ್ಕಾಗಿ ಅಲ್ಲ. ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರು ಇಂದು 49 ಲೋಕಸಭಾ ಸ್ಥಾನಗಳಲ್ಲಿ ಮತದಾನದ ಹಕ್ಕನ್ನು ಚಲಾಯಿಸುತ್ತಾರೆ ಯುವ ನ್ಯಾಯ್, ನಾರಿ ನ್ಯಾಯ್, ಕಿಸಾನ್ ನ್ಯಾಯ್, ಶ್ರಮಿಕ್ ನ್ಯಾಯ್ ಮತ್ತು ಹಿಸ್ಸೆದಾರಿ ನ್ಯಾಯ್ ಕಾರ್ಯಸೂಚಿ ಅಡಿಯಲ್ಲಿ ಮತ ಚಲಾಯಿಸಬೇಕು ಎಂದು ಹೇಳಿದ್ದಾರೆ.

ನಿಮ್ಮ ಕೈ ಇವಿಎಂ ಗುಂಡಿಯನ್ನು ಒತ್ತಿದಾಗ, ಈಗಾಗಲೇ ಅಸ್ಥಿರವಾಗಿರುವ ಸರ್ವಾಧಿಕಾರದ ಕುರ್ಚಿಗೆ ಮತ್ತೊಂದು ಹಿನ್ನಡೆಯಾಗಲಿದ್ದು ಪ್ರಜಾಪ್ರಭುತ್ವವು ಬಲಗೊಳ್ಳುತ್ತದೆ ಎಂದು ಖರ್ಗೆ ಹೇಳಿದರು. ಮೊದಲ ಬಾರಿಗೆ ಮತದಾನ ಮಾಡಿದವರನ್ನು ಸ್ವಾಗತಿಸಿದ ಅವರು, ಅವರದು ಐತಿಹಾಸಿಕ ಜವಾಬ್ದಾರಿ ಎಂದು ಪ್ರತಿಪಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com