ಮಧ್ಯ ಪ್ರದೇಶ: ಫ್ಲೈ ಓವರ್‌ನಿಂದ ಬಿದ್ದ ಬಸ್; ಇಬ್ಬರು ಸಾವು, 40 ಮಂದಿ ಗಾಯ

ಬಸ್ ಶಿವಪುರಿ ಜಿಲ್ಲೆಯ ಪಿಚೋರ್ ಪಟ್ಟಣಕ್ಕೆ ತೆರಳುತ್ತಿದ್ದಾಗ ಮಧ್ಯರಾತ್ರಿ 1.30 ರ ಸುಮಾರಿಗೆ ಪಚೋರ್ ಪಟ್ಟಣದ ಬಳಿ ಚಾಲಕನ ನಿಯಂತ್ರಣ ತಪ್ಪಿ ಫ್ಲೈಓವರ್‌ನಿಂದ ಕೆಳಗೆ ಬಿದ್ದಿದೆ ಎಂದು ಪಚೋರ್ ಪೊಲೀಸ್ ಠಾಣೆಯ ಉಸ್ತುವಾರಿ ಆಕಾಂಶಾ ಶರ್ಮಾ ಹೇಳಿದ್ದಾರೆ.
ಮಧ್ಯ ಪ್ರದೇಶ ಪೊಲೀಸ್ ವ್ಯಾನ್ ಅಪಘಾತ ನಡೆದ ಸ್ಥಳಕ್ಕೆ ಧಾವಿಸುತ್ತಿರುವುದು
ಮಧ್ಯ ಪ್ರದೇಶ ಪೊಲೀಸ್ ವ್ಯಾನ್ ಅಪಘಾತ ನಡೆದ ಸ್ಥಳಕ್ಕೆ ಧಾವಿಸುತ್ತಿರುವುದು

ರಾಜ್‌ಗಢ: ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ಖಾಸಗಿ ಬಸ್‌ ಫ್ಲೈಓವರ್‌ನಿಂದ ಬಿದ್ದು ಇಬ್ಬರು ಮೃತಪಟ್ಟು, 40 ಮಂದಿ ಗಾಯಗೊಂಡಿದ್ದಾರೆ. ಬಸ್ ಶಿವಪುರಿ ಜಿಲ್ಲೆಯ ಪಿಚೋರ್ ಪಟ್ಟಣಕ್ಕೆ ತೆರಳುತ್ತಿದ್ದಾಗ ಮಧ್ಯರಾತ್ರಿ 1.30 ರ ಸುಮಾರಿಗೆ ಪಚೋರ್ ಪಟ್ಟಣದ ಬಳಿ ಚಾಲಕನ ನಿಯಂತ್ರಣ ತಪ್ಪಿ ಫ್ಲೈಓವರ್‌ನಿಂದ ಕೆಳಗೆ ಬಿದ್ದಿದೆ ಎಂದು ಪಚೋರ್ ಪೊಲೀಸ್ ಠಾಣೆಯ ಉಸ್ತುವಾರಿ ಆಕಾಂಶಾ ಶರ್ಮಾ ಹೇಳಿದ್ದಾರೆ.

ಮೃತರಲ್ಲಿ ಒಬ್ಬನನ್ನು ಹರ್ಜತ್ ಸಿಂಗ್ (28ವ) ಎಂದು ಗುರುತಿಸಲಾಗಿದೆ. ಇನ್ನೊಬ್ಬನ ಗುರುತು ಪತ್ತೆಯಾಗಿಲ್ಲ. ಗಾಯಗೊಂಡವರಲ್ಲಿ 19 ಜನರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಇಂದೋರ್‌ನ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಉಳಿದವರು ಶಾಜಾಪುರ, ಬಯೋರಾ ಮತ್ತು ಪಚೋರ್‌ನ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಈ ಘಟನೆ ನಡೆದ ಸಮಯದಲ್ಲಿ ಚಾಲಕ ಮತ್ತು ಕಂಡಕ್ಟರ್‌ ಸ್ಥಳದಿಂದ ಪರಾರಿಯಾಗಿದ್ದಾರೆ. ಅವರನ್ನು ಪತ್ತೆ ಮಾಡಲು ಶೋಧ ಕಾರ್ಯ ನಡೆಯುತ್ತಿದೆ.

ಮತ್ತೊಂದು ದುರುಂತ: ಮಧ್ಯಪ್ರದೇಶದ ಸಿಯೋನಿಯಲ್ಲಿ ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಕಾರಿಗೆ ಡಿಕ್ಕಿ ಹೊಡೆದು 26 ವಿಶೇಷ ಸಶಸ್ತ್ರ ಪಡೆ (ಎಸ್‌ಎಎಫ್) ಸಿಬ್ಬಂದಿ ಸೇರಿದಂತೆ 28 ಮಂದಿ ಗಾಯಗೊಂಡಿದ್ದು, ಮೂವರು ಮೃತಪಟ್ಟಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಸಿಯೋನಿ ಮಂಡ್ಲಾ ರಾಜ್ಯ ಹೆದ್ದಾರಿಯ ಕಿಯೋಲಾರಿಯ ಧನಗಡ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. 31 ಯೋಧರಿದ್ದ ಬಸ್ ಮಾಂಡ್ಲಾ ಬೆಟಾಲಿಯನ್ ಕ್ಯಾಂಪ್‌ನಿಂದ ಪಾಂಡುರ್ನಾ ಚಿಂದ್ವಾರಕ್ಕೆ ಪ್ರಯಾಣ ಬೆಳೆಸುತ್ತಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com