
ಹರ್ಯಾಣ: ಹರಿಯಾಣದ ಅಂಬಾಲಾದಲ್ಲಿ ಶುಕ್ರವಾರ ನಸುಕಿನ ವೇಳೆ ಟ್ರಕ್ ಒಂದು ಮಿನಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಜನರು ಗಾಯಗೊಂಡಿದ್ದಾರೆ.
ಅಂಬಾಲಾ-ದೆಹಲಿ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ವೈಷ್ಣೋದೇವಿಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಒಂದೇ ಕುಟುಂಬದ ಏಳು ಸದಸ್ಯರು ಸಾವನ್ನಪ್ಪಿದ್ದಾರೆ ಮತ್ತು 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದ ನಂತರ ಚಾಲಕ ಕುಡಿದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಅಪಘಾತದಲ್ಲಿ ಬದುಕುಳಿದವರು ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ನಿದ್ರೆಯಲ್ಲಿದ್ದರು, ಮೃತರೆಲ್ಲಾ ಒಂದೇ ಕುಟುಂಬಕ್ಕೆ ಸೇರಿದವರು ಎಂದು ಅವರು ಹೇಳಿದ್ದಾರೆ.
Advertisement