ಲೋಕಸಭೆ ಚುನಾವಣೆ: ನಾಳೆ 6ನೇ ಹಂತದ ಮತದಾನ, 889 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ದೇಶದಲ್ಲಿ ಲೋಕಸಭೆ ಚುನಾವಣೆ ಅಂತಿಮ ಘಟ್ಟ ತಲುಪುತ್ತಿದ್ದು, ಶನಿವಾರ ಒಟ್ಟು 58 ಕ್ಷೇತ್ರಗಳಲ್ಲಿ 6ನೇ ಹಂತದ ಮತದಾನ ನಡೆಯಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಲೋಕಸಭೆ ಚುನಾವಣೆ ಅಂತಿಮ ಘಟ್ಟ ತಲುಪುತ್ತಿದ್ದು, ಶನಿವಾರ ಒಟ್ಟು 58 ಕ್ಷೇತ್ರಗಳಲ್ಲಿ 6ನೇ ಹಂತದ ಮತದಾನ ನಡೆಯಲಿದೆ. ಒಟ್ಟು 889 ಅಭ್ಯರ್ಥಿಗಳು ಕಣದಲ್ಲಿದ್ದು, 11 ಕೋಟಿ ಮತದಾರರು ಅವರ ಭವಿಷ್ಯ ನಿರ್ಧರಿಸಲಿದ್ದಾರೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿ ಕಾರಣ ಚುನಾವಣೆಗೆ ಸಂಬಂಧಿಸಿದ ವಸ್ತುಗಳನ್ನು ಸಾಗಿಸಲು ಸಮಸ್ಯೆಯಾದ ಕಾರಣ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಕ್ಷೇತ್ರದಲ್ಲಿ ಮೂರನೇ ಹಂತದಲ್ಲಿ ಮುಂದೂಡಿಕೆಯಾಗಿದ್ದ ಚುನಾವಣೆಯನ್ನು ನಾಳೆ ಆರನೇ ಹಂತದಲ್ಲಿ ಮತದಾನ ನಡೆಯಲಿದೆ.

ಭಾರತೀಯ ಹವಾಮಾನ ಇಲಾಖೆಯು ಮತದಾನ ನಡೆಯುವ ಕ್ಷೇತ್ರಗಳಲ್ಲಿ ರೀಮಲ್ ಚಂಡಮಾರುತದ "ಯಾವುದೇ ಪ್ರತಿಕೂಲ ಪರಿಣಾಮ" ಬೀರುವುದಿಲ್ಲ ಎಂದು ಹೇಳಿರುವುದಾಗಿ ಚುನಾವಣಾ ಆಯೋಗ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸಾಂದರ್ಭಿಕ ಚಿತ್ರ
ಲೋಕಸಭೆ ಚುನಾವಣೆ ಫಲಿತಾಂಶದ 'ಭವಿಷ್ಯ ಹೇಳಿ 10 ಲಕ್ಷ ರೂ. ಬಹುಮಾನ ಗೆಲ್ಲಿ': Narendra Nayak ಸವಾಲು!

ರಾಷ್ಟ್ರ ರಾಜಧಾನಿ ದೆಹಲಿ, ಒಡಿಶಾದ ಕೆಲವು ಲೋಕಸಭೆ ಮತ್ತು ವಿಧಾನಸಭೆ ಸ್ಥಾನಗಳ ಜೊತೆಗೆ ಪಶ್ಚಿಮ ಬಂಗಾಳದ ಕೆಲವು ಲೋಕಸಭಾ ಕ್ಷೇತ್ರಗಳಿಗೂ ಆರನೇ ಹಂತದಲ್ಲಿ ಮತದಾನ ನಡೆಯಲಿದೆ.

5.84 ಕೋಟಿ ಪುರುಷರು, 5.29 ಕೋಟಿ ಮಹಿಳೆಯರು ಮತ್ತು 5,120 ತೃತೀಯಲಿಂಗಿ ಮತದಾರರು ಸೇರಿದಂತೆ ಒಟ್ಟು 11.13 ಕೋಟಿ ಮತದಾರರು ಆರನೇ ಹಂತದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ.

ದೆಹಲಿ, ಗುರುಗ್ರಾಮ್ ಮತ್ತು ಫರಿದಾಬಾದ್ ಸೇರಿದಂತೆ ನಗರ ಕೇಂದ್ರಗಳಲ್ಲಿ ಶನಿವಾರ ಮತದಾನ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಮೂಲಕ ನಗರವಾಸಿಗಳ ನಿರಾಸಕ್ತಿ ಪ್ರವೃತ್ತಿಯನ್ನು ಬ್ರೇಕ್ ಮಾಡುವಂತೆ ಚುನಾವಣಾ ಆಯೋಗ ಮತದಾರರಿಗೆ ಮನವಿ ಮಾಡಿದೆ.

ಉಳಿದ 57 ಸ್ಥಾನಗಳಿಗೆ ಜೂನ್ 1 ರಂದು ಕೊನೆಯ ಹಂತದ ಮತದಾನ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com