
ನವದೆಹಲಿ: ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ವಿರುದ್ಧ ರಾಷ್ಟ್ರ ರಾಜಧಾನಿಯ ಹಾಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯ ಶುಕ್ರವಾರ ದೋಷಿ ಎಂದು ತೀರ್ಪು ನೀಡಿದೆ.
ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮಾ ಅವರು ಪಾಟ್ಕರ್ ಅವರನ್ನು ಕ್ರಿಮಿನಲ್ ಮಾನನಷ್ಟ ಅಪರಾಧಿ ಎಂದು ಘೋಷಿಸಿದರು. ಸಂಬಂಧಿತ ಕಾನೂನಿನಡಿ, ಮೇಧಾ ಪಾಟ್ಕರ್ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ಶಿಕ್ಷೆಯಾಗಿ ನೀಡಬಹುದು.
ನರ್ಮದಾ ಬಚಾವೋ ಆಂದೋಲನದ ವಿರುದ್ಧ ಜಾಹೀರಾತು ಪ್ರಕಟಿಸಿದ್ದಕ್ಕಾಗಿ ಪಾಟ್ಕರ್ ಮತ್ತು ಸಕ್ಸೇನಾ ವಿರುದ್ಧ 2000 ರಿಂದಲೂ ಕಾನೂನು ಹೋರಾಟ ನಡೆಯುತ್ತಿತ್ತು. ಸಕ್ಸೇನಾ ಆಗ ಅಹಮದಾಬಾದ್ ಮೂಲದ ಎನ್‌ಜಿಒ ( National Council for Civil Liberties) ಮುಖ್ಯಸ್ಥರಾಗಿದ್ದರು. ಟಿವಿ ಚಾನೆಲ್‌ನಲ್ಲಿ ತನ್ನ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮತ್ತು ಅವಹೇಳನಕಾರಿ ಪತ್ರಿಕಾ ಹೇಳಿಕೆ ನೀಡಿದ ಕಾರಣಕ್ಕಾಗಿ ಸಕ್ಸೇನಾ ಅವರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದರು.
Advertisement